Breaking News

ರಾಜ್ಯಮಟ್ಟದ ಗಾಲಿ ಕುರ್ಚಿ ರಗ್ಬಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಬೆಳಗಾವಿಗೆ

Spread the love

ಬೆಳಗಾವಿ: ಬೆಳಗಾವಿ ತಂಡವು ಜಿಲ್ಲಾ ಅಂಗವಿಕಲರ ಸೇವಾ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಗಾಲಿ ಕುರ್ಚಿ ರಗ್ಬಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.

ಬಾಗಲಕೋಟೆ ತಂಡ ದ್ವಿತೀಯ ಮತ್ತು ಮೈಸೂರು ತಂಡದವರು ತೃತಿಯ ಸ್ಥಾನ ಪಡೆದರು.

ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರಹುಸೇನ ಪಠಾಣ ಹಾಗೂ ಸುರೇಶ ಯಾದವ ಪ್ರತಿಷ್ಠಾನದ ಅಧ್ಯಕ್ಷ ಸುರೇಶ ಯಾದವ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.

ಬಿಜೆಪಿ ಉತ್ತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಸದಾನಂದ ಗುಂಟೆಪ್ಪನವರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಬಸವರಾಜ ಮಿಲ್ಲಾನಟ್ಟಿ, ತರಬೇತುದಾರ ವಿ.ಎಸ್. ಪಾಟೀಲ, ಡಾ.ಸುನೀಲ ಚಿಕ್ಕೋಡಿ, ಕರ್ನಾಟಕ ಗಾಲಿ ಕುರ್ಚಿ ರಗ್ಬಿ ಸಂಸ್ಥೆಯ ಹಾಗೂ ಜಿಲ್ಲಾ ಅಂಗವಿಕಲರ ಕ್ರೀಡಾ ಸಂಘದ ಅಧ್ಯಕ್ಷ ಮಹಾಂತೇಶ ಹೊಂಗಲ, ಚಿಗುರು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಲಕ್ಷ್ಮಣ ತರಕಾರ, ಅಂಧರ ಸೇವಾ ಸಂಸ್ಥೆ ಕಾರ್ಯದರ್ಶಿ ಶಿವನಗೌಡ ಪಾಟೀಲ, ಮುಖಂಡರಾದ ದೀಪಕ ಕಾಂಬಳೆ, ಆಕಾಶ ಬೇವಿನಕಟ್ಟಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ