Breaking News

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 89 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್​ ತಗುಲಿದೆ.

Spread the love

ಬೆಳಗಾವಿ: ರಾಜ್ಯದಲ್ಲಿ ಕೋವಿಡ್​ ಅಬ್ಬರ ಮುಂದುವರೆದಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 89 ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ.

ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲೇ 39 ಮಂದಿಗೆ ಸೋಂಕು ತಗುಲಿದೆ.

ಬೆಳಗಾವಿ ಎಪಿಎಂಸಿ ಠಾಣೆಯ 11 ಸಿಬ್ಬಂದಿ, ಶಹಾಪುರ ಠಾಣೆಯ ಮೂವರು ಸಿಬ್ಬಂದಿ, ಟಿಳಕವಾಡಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗೆ ಕೊರೊನಾ ವಕ್ಕರಿಸಿದೆ. ಓರ್ವ ಇನ್ಸ್‌ಪೆಕ್ಟರ್, ಇಬ್ಬರು ಪಿಎಸ್‌ಐ ಸೇರಿ ಕಮಿಷನರೇಟ್ ವ್ಯಾಪ್ತಿಯಲ್ಲಿ 39 ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್​ ಕಂಡುಬಂದಿದೆ.

ಉಳಿದಂತೆ ಡಿಎಆರ್, ಸಿಎಆರ್, ಕೆಎಸ್​​ಆರ್‌ಪಿ ಸೇರಿ ಒಟ್ಟಾರೆ 89 ಪೊಲೀಸರಿಗೆ ಕೋವಿಡ್​​ ತಗುಲಿರುವುದು ದೃಢಪಟ್ಟಿದೆ. ಎಲ್ಲರಲ್ಲೂ ಸೌಮ್ಯ ಲಕ್ಷಣಗಳಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ