ಬೆಂಗಳೂರಿನ ವಿಕಾಸಸೌಧದ ಕಛೇರಿಯಲ್ಲಿ, ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪೌಷ್ಟಿಕ ಆಹಾರದ ಕುರಿತು ಸುದೀರ್ಘವಾಗಿ ಚರ್ಚಿಸಿ, ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಾಯಿತು.
ರಾಯಚೂರು, ಯಾದಗಿರಿ, ಕಲಬುರ್ಗಿ , ಬೀದರ ಜಿಲ್ಲೆಯಲ್ಲಿ ಸತತವಾಗಿ ಮಕ್ಕಳು, ಗರ್ಭಿಣಿಯರು ಹಾಗೂ ಕಿಶೋರಿಯರು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಅಪೌಷ್ಟಿಕತೆ ನಿವಾರಿಸಲು ಚರ್ಚಿಸಲಾಯಿತು ಹಾಗೂ ರಾಜ್ಯದಲ್ಲಿ ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ, ಸದ್ಯ ಅಂಗನವಾಡಿ ಕೆಂದ್ರಗಳಲ್ಲಿ ನೀಡುತ್ತಿರುವ ಆಹಾರ ಕ್ರಮದಲ್ಲಿ ಬದಲಾವಣೆ ತರಲಾಗುವುದು. ಈಗಾಗಲೇ ಪರಿಣಿತರೊಂದಿಗೆ ಚರ್ಚಿಸಿದ್ದು, ಆದಷ್ಟು ಬೇಗ ಉತ್ತಮ ಪೌಷ್ಟಿಕ ಆಹಾರ ನೀಡಲಾಗುವುದು.
ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ರಾಕೇಶ್ ಸಿಂಗ್, ಕರ್ನಾಟಕ ಸಮಗ್ರ ಪೌಷ್ಟಿಕತೆ ಅಭಿಯಾನ ಸಲಹೆಗಾರರಾದ ಶ್ರೀಮತಿ ವೀಣಾ ಶ್ರೀರಾಮ ರಾವ್, ನಿರ್ದೇಶಕರಾದ ಶ್ರೀ. ಕೆ ದಯಾನಂದ, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
#Bangalore