ಬೆಂಗಳೂರು : ಏಕಾಏಕಿ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠಿಗರ ಮತ ಸೆಳೆಯುವ ಏಕೈಕ ಉದ್ದೇಶದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಮುಂದಾಗಿದೆ ಎಂದು ಆರೋಪಿಸಿವೆ.
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ಈ ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
Laxmi News 24×7