Breaking News

ಪಾಕಿಸ್ತಾನದ ಇಂಟರ್‌ ಸರ್ವೀಸಸ್‌ ಇಂಟೆಲಿಜೆನ್ಸಿ ನೀಡಿದವನಿಗೆ ಸಿಕ್ಕಿದು ಬರಿ 3000.

Spread the love

ಬೆಂಗಳೂರು: ಭಾರತೀಯ ಸೇನಾ ನೆಲೆಗಳ ಕುರಿತು ಫೋಟೋ ಸಹಿತ ಮಾಹಿತಿ ನೀಡಿದ್ದ ರಾಜಸ್ಥಾನ ಮೂಲದ ತನ್ನ ‘ಗೂಢಚಾರಿ’ ಜಿನೇಂದ್ರ ಸಿಂಗ್‌ನಿಗೆ ಪಾಕಿಸ್ತಾನದ ಇಂಟರ್‌ ಸರ್ವೀಸಸ್‌ ಇಂಟೆಲಿಜೆನ್ಸಿ (ಐಎಸ್‌ಐ) ನೀಡಿದ್ದು ಕೇವಲ ಮೂರು ಸಾವಿರ ರು.

ಮಾತ್ರ ಎಂಬ ಕುತೂಹಲಕಾರಿ ಸಂಗತಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ತನಿಖೆಯಲ್ಲಿ ಬಯಲಾಗಿದೆ.

ಪಾಕಿಸ್ತಾನದ ಪರ ಗೂಢಚಾರಿಕೆ ನಡೆಸಿದ ಪ್ರಕರಣದ ಆರೋಪಿ ಜಿನೇಂದ್ರ ಸಿಂಗ್‌ನ ಖಾತೆಗೆ ಆನ್‌ಲೈನ್‌ ಮೂಲಕ ಮೂರು ಸಾವಿರ ರು. ಸಂದಾಯವಾಗಿದೆ. ಈ ಹಣ ವರ್ಗಾವಣೆ ಬಗ್ಗೆ ಪರಿಶೀಲಿಸಿದಾಗ ಆ ಮೊತ್ತವು ಪಾಕಿಸ್ತಾನದ ಕರಾಚಿ ವ್ಯಕ್ತಿಯಿಂದ ಜಮೆಯಾಗಿರುವುದು ಗೊತ್ತಾಗಿದೆ ಎಂದು ವಿಶ್ವಸನೀಯ ಉನ್ನತ ಮೂಲಗಳು ‘ಕನ್ನಡಪ್ರಭ’ಕ್ಕೆ ತಿಳಿಸಿವೆ.

ತನ್ನ ಹನಿಟ್ರ್ಯಾಪ್‌ ಬಲೆಗೆ ಬಿದ್ದ ಜಿನೇಂದ್ರ ಸಿಂಗ್‌ನನ್ನು ಭಾರತೀಯ ಸೇನಾಧಿಕಾರಿಯೆಂದೇ ಆರಂಭದಲ್ಲಿ ಐಎಸ್‌ಐ ಭಾವಿಸಿದೆ. ಹೀಗಾಗಿ ಆತನಿಂದ ಭಾರಿ ಮಾಹಿತಿ ಸಿಗುವ ನಿರೀಕ್ಷೆ ಹೊಂದಿದ್ದ ಐಎಸ್‌ಐ ಏಜೆಂಟ್‌ಗಳು, ಜಿನೇಂದ್ರನಿಗೆ ಆತನ ‘ಫೇಸ್‌ಬುಕ್‌ ಸುಂದರಿ’ ಮೂಲಕ ಹಣದಾಸೆ ತೋರಿಸಿ ಪುಸಲಾಯಿಸಿದ್ದಾರೆ. ಅಂತೆಯೇ ರಾಜಸ್ಥಾನದಲ್ಲಿರುವ ಸೇನಾ ನೆಲೆಯೊಂದರ ಭಾವಚಿತ್ರವನ್ನು ‘ಫೇಸ್‌ಬುಕ್‌ ಸುಂದರಿ’ ಜತೆ ಹಂಚಿಕೊಂಡಿದ್ದಕ್ಕೆ ಪ್ರತಿಯಾಗಿ ಆತನ ಖಾತೆಗೆ ಹಣ ಜಮೆಯಾಗಿದೆ ಎಂದು ಮೂಲಗಳು ಹೇಳಿವೆ.

ಫೇಸ್‌ಬುಕ್‌ ಯುವತಿ ಬಲೆಗೆ ಬಿದ್ದ ಬಟ್ಟೆ ವ್ಯಾಪಾರಿ, ಪಾಕ್‌ ಗೂಢಚರನಾದ ಕತೆ!

ಈ ಭಾವಚಿತ್ರಗಳು ರವಾನೆಯಾದ ಬಳಿಕ ಸೇನಾ ನೆಲೆಯೊಳಗಿನ ವ್ಯವಸ್ಥೆ ಬಗ್ಗೆ ಐಎಸ್‌ಐ ಮಾಹಿತಿ ಕೋರಿದೆ. ಪದೇ ಪದೇ ಕೇಳಿದರೂ ಜಿನೇಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ಅನುಮಾನಗೊಂಡ ಐಎಸ್‌ಐ, ಜಿನೇಂದ್ರನ ಪೂರ್ವಾಪರ ವಿಚಾರಿಸಿದಾಗ ಆತನ ನಿಜ ಬಣ್ಣ ಗೊತ್ತಾಗಿದೆ. ಇದಾದ ಬಳಿಕ ಆತನೊಂದಿಗೆ ಹಣಕಾಸು ವ್ಯವಹಾರ ಮುಂದುವರೆದಿಲ್ಲ. ಬೆಂಗಳೂರು ಹಾಗೂ ರಾಜಸ್ಥಾನದ ಸೇನಾ ನೆಲೆಗಳ ಭಾವಚಿತ್ರವನ್ನು ಎರಡ್ಮೂರು ಬಾರಿ ಕಳುಹಿಸಿದರೂ ಹಣ ಮಾತ್ರ ಸಿಕ್ಕಿಲ್ಲವೆಂದು ತಿಳಿದು ಬಂದಿದೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆಗೆ ಸೆಪ್ಟೆಂಬರ್​ನಲ್ಲಿ ಭರ್ಜರಿ ಆದಾಯ: ಸರಕು ಸಾಗಣೆಯಿಂದ ₹427, ಪ್ರಯಾಣಿಕರಿಂದ ₹282 ಕೋಟಿ ಗಳಿಕೆ

Spread the love ಹುಬ್ಬಳ್ಳಿ: ಸೆ. 2025ರಲ್ಲಿ ನೈಋತ್ಯ ರೈಲ್ವೆಯು ಸರಕು ಸಾಗಣೆ ಮತ್ತು ಆದಾಯದಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ