ಬೆಂಗಳೂರು: ಮಹಾರಾಷ್ಟ್ರದ ರಾಜಕಾರಣಿಗಳು ತಮ್ಮ ರಾಜಕೀಯ ಉಳಿವಿಗಾಗಿ ಭಾಷೆ ಅಥವಾ ಗಡಿ ವಿವಾದವನ್ನು ಬಳಸಿಕೊಳ್ಳಬೇಡಿ ಎಂದು ಒತ್ತಾಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೆರೆಯ ರಾಜ್ಯಕ್ಕೆ ಕರ್ನಾಟಕ ತನ್ನ ಒಂದು ಇಂಚು ಭೂಮಿಯನ್ನು ಸಹ ಕೊಡುವುದಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರ್ನಾಟಕದ ಗಡಿ ವಿಚಾರದ ಬಗ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ ಒಂದಿಂಚೂ ಜಾಗವನ್ನೂ ಬಿಟ್ಟು ಕೊಡುವುದಿಲ್ಲ. ಮಹಾರಾಷ್ಟ್ರದಲ್ಲಿ ರಾಜಕಾರಣ ಯಾವಾಗ ಇಕ್ಕಟ್ಟಿಗೆ ಸಿಲುಕುತ್ತದೋ ಆಗ ಕರ್ನಾಟಕದ ಗಡಿ ವಿಚಾರದ ಬಗ್ಗೆ ಅವರು ಮಾತನಾಡುತ್ತಾರೆ ಎಂದರು.