Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರುತ್ತಿದೆ: ಸಿಎಂ ಬಿಎಸ್‍ವೈ

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರುತ್ತಿದೆ: ಸಿಎಂ ಬಿಎಸ್‍ವೈ

Spread the love

ಬೆಂಗಳೂರು-ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿಹೋಗಿರುವ ಆಘಾತಕಾರಿ ವಿಷಯವನ್ನು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪನವರೇ ಬಹಿರಂಗಪಡಿಸಿದ್ದಾರೆ.
ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಮ್ಮ ಕೈ ಮೀರುವ ಹಂತಕ್ಕೆ ಬಂದಿದೆ. ಆದರೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಎಲ್ಲರೂ ಇದನ್ನು ತಡೆಯಲು ಸರ್ವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹಾಗೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಈ ಹೇಳಿಕೆ ಜನತೆಯಲ್ಲಿ ಇನ್ನಷ್ಟು ಆತಂಕ ಉಂಟು ಮಾಡಿದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಿರೀಕ್ಷೆಯನ್ನು ಮೀರಿ ಕೆಲ ಜಿಲ್ಲೆಗಳಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರುತ್ತಿದೆ.
ಆದರೂ ಜನರನ್ನು ರಕ್ಷಣೆ ಮಾಡಲು ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಜನತೆ ಒಳಗಾಗುವುದು ಬೇಡ, ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬದಂತೆ ನಮ್ಮ ಸರ್ಕಾರ ಬದ್ಧವಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ, ಪೆÇಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಎಲ್ಲರೂ ಒಗ್ಗೂಡಿ ಕೆಲಸ ಮಾಡುತ್ತಿದ್ದಾರೆ ಎಂದರು. ಕೊರೊನಾ ಸೋಂಕು ಪೀಡಿತರಿಗೆ ತೊಂದರೆಯಾಗದಂತೆ ರಕ್ಷಣೆ ಮಾಡಲು ತಕ್ಷಣವೇ 200 ಆಯಂಬುಲೆನ್ಸ್‍ಗಳನ್ನು ಖರೀದಿ ಮಾಡಲು ಸೂಚನೆ ಕೊಡಲಾಗಿದೆ.

ನಿನ್ನೆಯಷ್ಟೇ 400 ಆಯಂಬುಲೆನ್ಸ್ ಖರೀದಿಗೆ ಸೂಚನೆ ಕೊಡಲಾಗಿತ್ತು. ಕೊರೊನಾ ಪಾಸಿಟಿವ್ ಖಚಿತವಾದ ತಕ್ಷಣ ತಡಮಾಡದೆ ರೋಗಿಗಳನ್ನು ಆಸ್ಪತ್ರೆಗೆ ಕರೆತರಲು ಇವುಗಳನ್ನು ಮೀಸಲಿಡುವುದಾಗಿ ಹೇಳಿದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದೆ. ಇನ್ನು ಕೆಲವು ಕಠಿಣ ಕ್ರಮಗಳನ್ನು ಜಾರಿ ಮಾಡುವಂತೆ ಸಲಹೆ ಮಾಡಿದ್ದಾರೆ. ಅದನ್ನು ಸಹ ನಾವು ಅನುಷ್ಠಾನ ಮಾಡುತ್ತೇವೆ. ನಾಳೆ ಪತ್ರಿಕಾಗೋಷ್ಠಿ ಕರೆದಿದ್ದು ಎಲ್ಲ ವಿವರಗಳನ್ನು ಮಾಧ್ಯಮಗಳಿಗೆ ತಿಳಿಸುವುದಾಗಿ ಯಡಿಯೂರಪ್ಪ ಹೇಳಿದರು.

ಮೂಲಗಳ ಪ್ರಕಾರ ಬೆಂಗಳೂರು ನಗರ, ಶಿವಮೊಗ್ಗ, ಯಾದಗಿರಿ, ಕಲಬುರಗಿ, ಉಡುಪಿ, ಚಿಕ್ಕಬಳ್ಳಾಪುರ, ರಾಯಚೂರು, ಬೀದರ್ ಸೇರಿದಂತೆ 8ರಿಂದ 10 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಒಂದೇ ಸಮನೆ ಏರಿಕೆಯಾಗುತ್ತಿರುವ ಬಗ್ಗೆ ಯಡಿಯೂರಪ್ಪನವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಮತ್ತೆ ಲಾಕ್‍ಡೌನ್ ಜಾರಿಗೊಳಿಸಿ ಬಿಗಿ ಕ್ರಮ ಕೈಗೊಳ್ಳಬೇಕೆಂಬ ಚಿಂತನೆಯಲ್ಲಿದ್ದಾರೆಂದು ತಿಳಿದುಬಂದಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ