ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಆಶಾ ಕಾರ್ಯಕರ್ತೆಯರು ಪ್ರಾಣ ಲೆಕ್ಕಿಸದೇ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಅನೇಕ ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇವರಿಗೆ ನೀಡುತ್ತಿರುವ ಮಾಸಿಕ ವೇತನ 4,000 ರೂ ಕೆಲವರಿಗೆ 6,000 ರೂ ನೀಡಲಾಗುತ್ತಿದೆ. ಆದರೆ ಸರ್ಕಾರ ಬಜೆಟ್ ನಲ್ಲಿ 8 ರಿಂದ 9 ಸಾವಿರ ರೂ ಘೋಷಿಸಿತ್ತು. ಆದರೆ ಇದುವರೆಗೆ 1 ರೂಪಾಯಿ ಹೆಚ್ಚಿಸಿಲ್ಲ. ಆದ್ದರಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಸಂಬಳ ನೀಡಿ ಕೋವಿಡ್ ಅಗತ್ಯಾ ರಕ್ಷಣಾ ಸಾಮಗ್ರಿಗಳಿಗೆ ಒತ್ತಾಯಿಸಿ ಪತ್ರ ಬರೆದಿದ್ದಾರೆ.
Laxmi News 24×7