ಬೆಂಗಳೂರು: ಕರ್ನಾಟಕದಲ್ಲಿ ಇಂದು 5324 ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 101465ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 1470 ಜನರಿಗೆ ಕೊವಿಡ್ ದೃಢಪಟ್ಟಿರುವುದು ಖಚಿತವಾಗಿದೆ. ಇಂದಿನ ವರದಿ ಬಳಿಕ ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 46923ಕ್ಕೆ ಏರಿಕೆಯಾಗಿದೆ. ನಗರದಲ್ಲಿಂದು 784 ಜನರು ಗುಣಮುಖರಾಗಿದ್ದು, 26 ಜನ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 917.
ರಾಜ್ಯದಲ್ಲಿಂದು 75 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಂದು ಒಂದೇ ದಿನ 1847 ಜನರು ಚೇತರಿಕೆ ಕಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ, 61819 ಕೇಸ್ ಸಕ್ರಿಯವಾಗಿದೆ. ಇದುವರೆಗೂ 37685 ಜನರು ಡಿಸ್ಚಾರ್ಜ್ ಆಗಿದ್ದಾರೆ. 598 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದಿನ ವರದಿ ಬಳಿಕ ಕರ್ನಾಟಕದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ. ದೇಶದಲ್ಲಿ ಒಂದು ಲಕ್ಷ ಕೊರೊನಾ ರೋಗಿಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಐದನೇ ರಾಜ್ಯ ಎನಿಸಿಕೊಂಡಿದೆ.
ಭಾರತದಲ್ಲಿ ಹೊಸದಾಗಿ 49,931 ಕೊರೊನಾ ಸೋಂಕಿತರು ಪತ್ತೆ
ಕರ್ನಾಟಕಕ್ಕೂ ಮುಂಚೆ ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಆಂಧ್ರಪ್ರದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕೊವಿಡ್ ಸೋಂಕಿತರು ಪತ್ತೆಯಾಗಿದ್ದರು.