Breaking News

ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ

Spread the love

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಮವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಕೊವಿಡ್ ತಗುಲಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೂ ತಗುಲಿದೆ ಕೊರೊನಾ

ಕುಮಾರಸ್ವಾಮಿ ಮಾತ್ರವಲ್ಲ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸೇರಿದಂತೆ ಹಲವು ರಾಜಕೀಯ ನಾಯಕರು ಸಿದ್ದರಾಮಯ್ಯ ಚೇತರಿಕೆಗೆ ಹಾರೈಸಿದ್ದಾರೆ.

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ