ಬೆಂಗಳೂರು : ಹಿರಿಯೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೋನಾ ಪಾಸಿಟಿವ್
ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ನನ್ನ ಆಪ್ತವಲಯದ ಎಲ್ಲರೂ ಪರೀಕ್ಷೆಗೆ ಒಳಗಾಗಿದ್ದು ಹಾಗೂ ನನ್ನ ಸಂಪರ್ಕದಲ್ಲಿರುವ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂಬುದಾಗಿ ತಿಳಿಸಿದ್ದಾರೆ.
ಹಾಗೇ ಈ ಕುರಿತಂತೆ ಟ್ವಿಟ್ ಮಾಡಿರುವ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ.
ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.
Laxmi News 24×7