Breaking News

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ದಾಖಲಾದವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌

Spread the love

ಬೆಂಗಳೂರು : ಸರಕಾರದ ಮೂಲಕ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ದಾಖಲಾದವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

ಕೋವಿಡ್ ಚಿಕಿತ್ಸೆ ಹೆಸರಿನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ನಿಯಮ 69ರ ಅಡಿ ಪ್ರಸ್ತಾಪಿಸಿದ ವಿಷಯಗಳಿಗೆ ಮಂಗಳವಾರ ಅವರು ಉತ್ತರ ನೀಡಿದರು.

ಚರ್ಚೆ ವೇಳೆ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ ಅವರು, ಕೊರೋನ ಚಿಕಿತ್ಸೆ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು ಹಣ ಪಡೆಯಲಾಗುತ್ತಿದೆ ಎಂಬ ಪ್ರಶ್ನೆ ಎತ್ತಿದರು, ಇದಕ್ಕೆ ಕೂಡಲೇ ಪ್ರತಿಕ್ರಿಯಿಸಿದ ಸಚಿವರು, ಕೊರೋನ ಚಿಕಿತ್ಸೆಯಲ್ಲಿ ಎರಡು ವಿಧಗಳಿವೆ. ಕೋವಿಡ್‌ ದೃಢವಾದ ಕೂಡಲೇ ಬಿಬಿಎಂಪಿ ಮೂಲಕ ನೋಂದಣಿ ಮಾಡಿಕೊಂಡು ಸರಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ದಾಖಲಾದರೆ, ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರ ಭರಿಸಲಿದೆ.

ಸರಕಾರದಲ್ಲಿ ನೋಂದಣಿ ಮಾಡಿಕೊಳ್ಳದೇ, ನೇರವಾಗಿ ಅವರೇ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಅಂತಹವರು ಚಿಕಿತ್ಸಾ ವೆಚ್ಚವನ್ನು ಅವರೇ ಭರಿಸಬೇಕು. ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು ಶುಲ್ಕ ವಿಧಿಸುತ್ತಿರುವುದು ಗಮನಕ್ಕೆ ಬಂದ ಕೂಡಲೇ, ಖಾಸಗಿಯವರಿಗೂ ಕೊರೋನಾ ಚಿಕಿತ್ಸಾ ವೆಚ್ಚವನ್ನು ನಿಗದಿ ಮಾಡಿದ್ದೇವೆ ಎಂದು ಉತ್ತರಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡುತ್ತಾ, ಸರಕಾರ ಕೊರೋನ ಸೋಂಕಿನ ಅಂಕಿ ಅಂಶ ಹಾಗೂ ಸಾವಿನ ಅಂಕಿಅಂಶವನ್ನು ತಪ್ಪಾಗಿ ನೀಡುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ‌ ಸರಕಾರ ಪ್ರಾರಂಭದಿಂದ ಈವರೆಗೂ ಒಂದು ಅಂಕಿಯನ್ನೂ ತಪ್ಪಾಗಿ ನೀಡಿಲ್ಲ. ಸರಕಾರ ತಪ್ಪು ಮಾಹಿತಿ ಕೊಡುತ್ತದೆ ಎಂದು ಆರೋಪ‌ ಮಾಡುವ‌ ಮೊದಲು , ನೀವು ಸಹ ಸರಕಾರ ನಡೆಸಿದವರು ಎಂಬುದನದನು ಮರೆಯಬೇಡಿ. ಪ್ರಸ್ತುತ ರಾಜ್ಯದಲ್ಲಿ ಕೊರೋನ‌ಸಾವಿನ ಪ್ರಮಾಣ ಶೆ.1.56 ರಷ್ಟಿದೆ, ಇದು‌ದೇಶದ ಸಾವಿನ ಪ್ರಮಾಣಕ್ಕಿಂತ ಕಡಿಮೆ‌ ಇದೆ‌ ಎಂಬುದು ಗಮನಾರ್ಹ‌ ಎಂದರು.


Spread the love

About Laxminews 24x7

Check Also

ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದ ರಮೇಶ ಜಾರಕಿಹೊಳಿ,ಯತ್ನಾಳ,ಬೆಳಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ

Spread the loveಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಮುಖಂಡರು ಶುಕ್ರವಾರ ಪತ್ರಿಕಾಗೋಷ್ಠಿ ಕರೆದಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ