Breaking News

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ ಗಲ್ಲು ಶಿಕ್ಷೆ

Spread the love

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ 6 ತಿಂಗಳು ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಢ ವಿಧಿಸಿ 55ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಬಾಗಲಗುಂಟೆಯ ನಿವಾಸಿ ವೆಂಕಟೇಶ್ (27) ಶಿಕ್ಷೆಗೆ ಗುರಿಯಾದ ಆರೋಪಿ. 2018ರಲ್ಲಿ ಮನೆಯಲ್ಲಿ ಒಂಟಿಯಾಗಿದ್ದ 16 ವರ್ಷದ ಬಾಲಕಿಯನ್ನು ಕರೆದೊಯ್ದಿದ್ದ. ಅಕ್ರಮವಾಗಿ ಕೂಡಿ ಅತ್ಯಾಚಾರ ಎಸಗಿದ್ದ. ಇದರಿಂದ ಬಾಲಕಿ ತೀರ ಅಸ್ವಸ್ಥಗೊಂಡಿದ್ದಳು. ಸಂಜೆ ಮನೆಗೆ ಬಂದಿದ್ದ ಪಾಲಕರು ವಿಚಾರಿಸಿದಾಗ ಕೃತ್ಯ ಬಯಲಿಗೆ ಬಂದಿತ್ತು.

ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಆಕೆಯ ಹೇಳಿಕೆಯನ್ನು ಪಡೆದು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿತ್ತು. ಕೃತ್ಯದ ಬಗ್ಗೆ ತಪ್ಪೊಪ್ಪಿಕೊಂಡಿದ್ದ.ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯಕೀಯ ತಪಾಸಣೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿತ್ತು. ಸಾಕ್ಷ್ಯಧಾರಗಳನ್ನು ಪರಿಗಣಿಸಿದ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದರ್ ಕುಮಾರ್ ಮೀನಾ ತಿಳಿಸಿದ್ದಾರೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ