Breaking News

ಕರ್ನಾಟಕದ ನಾಲ್ವರು ಅಭ್ಯರ್ಥಿಗಳೂ ಅವಿರೋಧ ಆಯ್ಕೆ

Spread the love

ರಾಜ್ಯಸಭೆ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದ ನಾಲ್ವರು ಅಭ್ಯರ್ಥಿಗಳಾದ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಹಾಗೂ ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನಿಂದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯಸಭಾ ಚುನಾವಣೆ-2020ರಲ್ಲಿ ಕರ್ನಾಟಕದಲ್ಲಿ ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಅವಿರೋಧವಾಗಿ ಆಯ್ಕೆಯಾದ ಅಧಿಕೃತ ಘೋಷಣಾ ಪತ್ರವನ್ನು ಕಾಂಗ್ರೆಸ್‍ನ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಅಭ್ಯರ್ಥಿಗಳಾದ ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅವರು ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

20 ವರ್ಷಕ್ಕೂ ಮೇಲ್ಪಟ್ಟು ಸೆರೆವಾಸಕ್ಕೆ ಗುರಿಯಾದವರ ಶಿಕ್ಷೆ ಮಾಫಿ ಮನವಿ ತಿರಸ್ಕರಿಸಬೇಕೆಂಬ ನಿಯಮವಿಲ್ಲ: ಹೈಕೋರ್ಟ್

Spread the loveಬೆಂಗಳೂರು: ಇಪ್ಪತಕ್ಕೂ ಹೆಚ್ಚು ವರ್ಷಗಳ ಕಾಲ ಸೆರೆವಾಸಕ್ಕೊಳಗಾಗುವ ಅಪರಾಧಿಗಳು ನಿಗದಿತ ಅವಧಿಯ ಜೈಲು ವಾಸದ ಬಳಿಕ ಶಿಕ್ಷೆಯ ಮಾಫಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ