ರಾಜ್ಯಸಭೆ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದ ನಾಲ್ವರು ಅಭ್ಯರ್ಥಿಗಳಾದ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಹಾಗೂ ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯಸಭಾ ಚುನಾವಣೆ-2020ರಲ್ಲಿ ಕರ್ನಾಟಕದಲ್ಲಿ ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಅವಿರೋಧವಾಗಿ ಆಯ್ಕೆಯಾದ ಅಧಿಕೃತ ಘೋಷಣಾ ಪತ್ರವನ್ನು ಕಾಂಗ್ರೆಸ್‍ನ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಅಭ್ಯರ್ಥಿಗಳಾದ ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅವರು ಪಡೆದುಕೊಂಡಿದ್ದಾರೆ.