Breaking News

ಜೈಲಿನ ಸೆಲ್ ನಲ್ಲೇ ಕಿತ್ತಾಡಿಕೊಳ್ಳುತ್ತಿದ್ದು ನಟಿಯರು : ಜೈಲ್ ಸಿಬ್ಬಂದಿಗಳಿಗೆ ತಲೆ ನೋವು

Spread the love

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಜೈಲಿನ ಸೆಲ್ ನಲ್ಲೇ ಕಿತ್ತಾಡಿಕೊಳ್ಳುತ್ತಿದ್ದು, ಜೈಲು ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದೇ ಕೊಠಡಿಗೆ ರಾಗಿಣಿ, ಸಂಜನಾರನ್ನು ಶಿಫ್ಟ್ ಮಾಡಲಾಗಿದ್ದು, ಜೈಲಿನಲ್ಲೇ ಇಬ್ಬರೂ ಪ್ರತಿ ದಿನ ಕಾದಾಟ ನಡೆಸಿದ್ದಾರೆ. ಚಿಕ್ಕ ಚಿಕ್ಕ ವಿಷಯಗಳಿಗೂ ಪರಸ್ಪರ ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಮಾಡಿಕೊಳ್ಳುತ್ತಿದ್ದು, ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೂ ಹೋಗುತ್ತಿದ್ದಾರೆ ಎನ್ನಲಾಗಿದೆ.

ಅಕ್ಕಪಕ್ಕದ ಸೆಲ್ ನಲ್ಲಿರುವ ಕೈದಿಗಳಿಗೂ ನಟಿ ಮಣಿಯರ ಜಗಳದಿಂದ ತೊಂದರೆಯಾಗುತ್ತಿದ್ದು, ಜೈಲು ಸಿಬ್ಬಂದಿಗಳು ಜಗಳ ಬಿಡಿಸಲು ಬಂದರೂ ಸುಮ್ಮನಾಗುತ್ತಿಲ್ಲ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ