Breaking News
Home / ಜಿಲ್ಲೆ / ಸಾಲದ ಮೊರೆ ಹೋದ ಬಿ ಎಸ್ ವೈ ಸರ್ಕಾರ

ಸಾಲದ ಮೊರೆ ಹೋದ ಬಿ ಎಸ್ ವೈ ಸರ್ಕಾರ

Spread the love

ಬೆಂಗಳೂರು – ರಾಜ್ಯದಲ್ಲಿ ಲಾಕ್‍ಡೌನ್ ಘೋಷಣೆಯಾದ ಬಳಿಕ ಕಳೆದ ಆರು ತಿಂಗಳಿನಿಂದ ಬಹುತೇಕ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡ ಪರಿಣಾಮ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದು, ಸಾಲದ ಮೊರೆ ಹೋಗಲು ನಿರ್ಧರಿಸಿದೆ.

ಸರ್ಕಾರದ ಬೊಕ್ಕಸಕ್ಕೆ ಆದಾಯ ತರುತ್ತಿದ್ದ ಮೂಲಗಳಿಂದ ನಿರೀಕ್ಷಿತ ಪ್ರಮಾಣದ ಪರಿಣಾಮ ವರಮಾನ ಬಾರದಿರುವುದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ತಲೆಬಿಸಿ ತಂದಿದೆ. ಆದಾಯದ ಮೂಲಗಳೆಲ್ಲ ಬರಿದಾಗಿದ್ದು, ಬೊಕ್ಕಸ ಖಾಲಿ ಖಾಲಿಯಾಗಿದೆ.

ಅನಿವಾರ್ಯ ಸ್ಥಿತಿಯಲ್ಲಿರುವ ಸರ್ಕಾರ 33 ಸಾವಿರ ಕೋಟಿ ರೂ. ಹೆಚ್ಚುವರಿ ಸಾಲವನ್ನು ಮಾರುಕಟ್ಟೆಯಿಂದ ಎತ್ತುವಳಿ ಮಾಡಲು ನಿರ್ಧರಿಸಿದೆ. ಪ್ರಸಕ್ತ ವರ್ಷದಲ್ಲಿ 2.37 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದ್ದು 1,79,920 ಕೋಟಿ ರೂ.

ಆದಾಯ ನಿರೀಕ್ಷೆ ಮಾಡಲಾಗಿತ್ತು.

ಆದರೆ, ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ತೆರಿಗೆ ಮತ್ತಿತರ ಆದಾಯ 1.14 ಲಕ್ಷ ಕೋಟಿ ರೂ.ಗೆ ಕುಸಿಯುವ ಸಾಧ್ಯತೆ ಇದೆ. ಇದರಿಂದ ಸರ್ಕಾರಕ್ಕೆ 65,920 ಕೋಟಿ ರೂ. ಹಣದ ಕೊರತೆ ಎದುರಾಗಲಿದೆ. ಕೊರೊನಾ ಸಂಕಷ್ಟದಿಂದಾಗಿ ಕೇಂದ್ರ ಸರ್ಕಾರವು ಶೇ.3ರಿಂದ 5ರವರೆಗೆ ಸಾಲ ಪಡೆಯಲು ಅವಕಾಶ ನೀಡಿದೆ.

ಇದರಿಂದ 36,700 ಕೋಟಿ ರೂ. ಹೆಚ್ಚುವರಿ ಸಾಲ ಪಡೆಯಲು ಸರ್ಕಾರಕ್ಕೆ ಅವಕಾಶ ಇದ್ದು, ಸದ್ಯ 33,000 ಕೋಟಿ ರೂ. ಸಾಲ ಪಡೆಯಲು ಅವೇಶನದಲ್ಲೂ ಅನುಮೋದನೆ ಪಡೆಯಲಾಗಿದೆ.ರಾಜ್ಯ ಸರ್ಕಾರ ಈ ಬಾರಿ ಸಾಲವನ್ನೇ ಬಹುವಾಗಿ ನೆಚ್ಚಿಕೊಂಡಿದೆ. ಅಭಿವೃದ್ಧಿ ಕೆಲಸ ಹಾಗೂ ಸರ್ಕಾರಿ ನೌಕರರ ವೇತನಕ್ಕಾಗಿ ಸಾಲದ ಮೊರೆ ಹೋಗಲು ನಿರ್ಧರಿಸಿದೆ.

ಆರ್‍ಬಿಐ ಅಂಕಿ-ಅಂಶದ ಪ್ರಕಾರ 2020-21ರ ಆರ್ಥಿಕ ವರ್ಷದಲ್ಲಿ ಸರ್ಕಾರ ಜುಲೈವರೆಗೆ 12,000 ಕೋಟಿ ರೂ. ಸಾಲ ಪಡೆದಿದೆ. ನಬಾಡ್‍ನಿಂದ 52.29 ಕೋಟಿ ರೂ.ಸಾಲ ಪಡೆಯಲಾಗಿದೆ. ರಾಜ್ಯ ಸರ್ಕಾರ ಆರ್‍ಬಿಐ ಮೂಲಕ ರಾಜ್ಯ ಅಭಿವೃದ್ಧಿ ಸಾಲ (ಎಸ್‍ಡಿಎಲ್)ವನ್ನು ಎತ್ತುವಳಿ ಮಾಡುತ್ತಿದೆ.

ಆಗಸ್ಟ್ ತಿಂಗಳಲ್ಲಿ ಸರ್ಕಾರ 7,000 ಕೋಟಿ ರೂ. ಸಾಲ ಎತ್ತುವಳಿ ಮಾಡಿದೆ. ಆಗ¸್ಟï 11, ಆ.18 ಹಾಗೂ ಆ.25ಕ್ಕೆ ತಲಾ 2000 ಕೋಟಿ ರೂ. ಎಸ್‍ಡಿಎಲ್‍ನ್ನು ಎತ್ತುವಳಿ ಮಾಡಿದ್ದರೆ, ಆ.4ರಂದು ರಾಜ್ಯ ಸರ್ಕಾರ 1000 ಕೋಟಿ ರೂ. ಸಾಲ ಪಡೆದಿದೆ.

ಸೆಪ್ಟೆಂಬರ್‍ನಲ್ಲಿ ರಾಜ್ಯ ಸರ್ಕಾರ ಒಟ್ಟು 10,000 ಕೋಟಿ ರೂ. ಸಾಲ ಎತ್ತುವಳಿ ಮಾಡಿದೆ. ಅದರಂತೆ ಸೆ.1, ಸೆ.8, ಸೆ.15, ಸೆ.22 ಹಾಗೂ ಸೆ.29ಕ್ಕೆ ತಲಾ 2000 ಕೋಟಿ ರೂ.ನಂತೆ ಆರ್‍ಬಿಐ ಮೂಲಕ ರಾಜ್ಯ ಅಭಿವೃದ್ಧಿ ಸಾಲವನ್ನು ಎತ್ತುವಳಿ ಮಾಡಿದೆ.

ಅದೇ ರೀತಿ ಅ.6ರಂದು ಸರ್ಕಾರ 2,000 ಕೋಟಿ ರೂ. ರಾಜ್ಯ ಅಭಿವೃದ್ಧಿ ಸಾಲವನ್ನು ಎತ್ತುವಳಿ ಮಾಡಿದೆ. ಉಳಿದಂತೆ ಅಕ್ಟೋಬರ್‍ನಲ್ಲಿ ರಾಜ್ಯ ಸರ್ಕಾರ ಇನ್ನೂ 6,000 ಕೋಟಿ ರೂ. ಸಾಲವನ್ನು ಪಡೆಯಲು ಯೋಜಿಸಿದೆ. ಆ ಮೂಲಕ ಅಕ್ಟೋಬರ್ ನಲ್ಲಿ 8,000 ಕೋಟಿ ರೂ. ಸಾಲ ಎತ್ತುವಳಿ ಮಾಡಲಿದೆ.

ನವೆಂಬರ್‍ನಲ್ಲಿ ರಾಜ್ಯ ಸರ್ಕಾರ 8,000 ಕೋಟ ರೂ. ಸಾಲ ಎತ್ತುವಳಿ ಮಾಡಲು ನಿರ್ಧರಿಸಿದ್ದರೆ, ಡಿಸೆಂಬರ್‍ನಲ್ಲಿ ಒಟ್ಟು 10,000 ಕೋಟಿ ರೂ. ಸಾಲ ಪಡೆಯಲು ನಿರ್ಧರಿಸಿದೆ. ಜಿಎಸ್‍ಟಿ ಪರಿಹಾರ 11,324 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದ ಮರುಪಾವತಿ ಭರವಸೆಯೊಂದಿಗೆ ಹೆಚ್ಚುವರಿ ಸಾಲ ಮಾಡಲು ಅವಕಾಶ ನೀಡಲಾಗಿದೆ.

ಇವುಗಳೆಲ್ಲದರ ಪರಿಣಾಮ ಈ ಆರ್ಥಿಕ ವರ್ಷದ ಅಂತ್ಯಕ್ಕೆ ರಾಜ್ಯದ ಒಟ್ಟು ಸಾಲ 4.19 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಾಗುವ ಸಾಧ್ಯತೆ ಇದೆ. ಇಷ್ಟಾದರೂ ಒಟ್ಟು ಜಿಡಿಪಿ ಉತ್ಪನ್ನದ ಶೇ.23.2ರಷ್ಟು ಮಾತ್ರ ಸಾಲ ಆಗಲಿದೆ. ಶೇ.25ಕ್ಕಿಂತ ಹೆಚ್ಚಿರಬಾರದು ಎಂಬ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ನಿಯಮಗಳ ಅಡಿಯೇ ಇರಲಿದೆ.

 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ