Breaking News

ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ

Spread the love

ಬೆಂಗಳೂರು: ಏನೂ ಅರಿಯದ ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದ ವಿನೋದ್​ ಕುಮಾರ್ (2) ಮೃತ ದುರ್ದೈವಿ. ಉಮೇಶ್​ ಎಂಬುವವರು ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿಸುತ್ತಿದ್ದರು. ಕೊಪ್ಪಳ ಮೂಲದ ಅಂಬರೀಷ್​ ದಂಪತಿ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಕೆಂಗೇರಿ ಸಮೀಪದ ಕೋಡಿಪಾಳ್ಯದಲ್ಲಿ ಶೆಡ್​ನಲ್ಲಿ ನೆಲೆಸಿದ್ದರು. ಅಂಬರೀಷ್​ ದಂಪತಿಗೆ ಒಬ್ಬನೇ ಪುತ್ರ ವಿನೋದ್​. ಬಿಜಿಎಸ್​ ಆಸ್ಪತ್ರೆಯಲ್ಲಿ ತಂದೆ ಸೆಕ್ಯೂರಿಟಿ ಗಾರ್ಡ್​ ಆಗಿಕೆಲಸ ಮಾಡುತ್ತಿದ್ದು, ತಾಯಿ ಕೂಲಿ ಕೆಲಸ ಮಾಡುತ್ತಿದ್ದಾರೆ.ಶುಕ್ರವಾರ ಬೆಳಗ್ಗೆ ಎಂದಿನಂತೆ ತಂದೆ ಕೆಲಸಕ್ಕೆ ಹೋಗಿದ್ದು, ತಾಯಿ ಮಗನಿಗೆ ಸ್ನಾನ ಮಾಡಿಸಿ ನಂತರ ತಾನೂ ಸ್ನಾನಕ್ಕೆ ಹೋಗಿದ್ದರು.

ಈ ವೇಳೆ ಅಕ್ಕಪಕ್ಕದ ಮಕ್ಕಳ ಜತೆ ಆಟವಾಡುತ್ತಿದ್ದ ವಿನೋದ್​, ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್​ ಅಳವಡಿಸಲೆಂದು ತೋಡಲಾಗಿದ್ದ ಗುಂಡಿಯಲ್ಲಿ ಬಿದ್ದಿದ್ದ. ಮಕ್ಕಳು ಕೂಗಿಕೊಂಡಾಗ ಸ್ಥಳೀಯರು ಬಂದು ಬಾಲಕನನ್ನು ಮೇಲಕ್ಕೆತ್ತಿ ಕೂಡಲೇ ಬಿಜಿಎಸ್​ ಆಸ್ಪತ್ರೆಗೆ ದಾಖಲಿಸಿದ್ದರಾದರೂ ಮಗು ಬದುಕಲಿಲ್ಲ.

ಲಿಫ್ಟ್ ಅಳವಡಿಸಲು 6 ಅಡಿ ಗುಂಡಿ ತೋಡಿದ್ದರು. ಇತ್ತೀಚೆಗೆ ಸುರಿದ ಮಳೆ ಇಂದಾಗಿ ನೀರು ತುಂಬಿಕೊಂಡಿತ್ತು. ಯಾರೂ ಹೋಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಟ್ಟಡ ಮಾಲೀಕ ಮತ್ತು ಗುತ್ತಿಗೆದಾರನ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ