Breaking News

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಸೂಚನೆ

Spread the love

ಬೆಂಗಳೂರು- ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ನವೆಂಬರ್ 1 ರಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಬೇಕು ಎಂದು ತಿಳಿಸಿದ್ದಾರೆ. ಕಾರ್ಯಕ್ರಮ ನಡೆಸುವ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಹಾಕಿಕೊಳ್ಳಬೇಕು

ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನಡೆಸುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

ರಾಜ್ಯೋತ್ಸವದ ಆಚರಣೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಉಂಟಾಗಲು ಗೌರವ ಪೂರಕವಾಗಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಆಚರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ