Breaking News

ವಾಲ್ಮೀಕಿ ಸಮುದಾಯ ಮೀಸಲಾತಿಗಾಗಿ ಮತ್ತೊಮ್ಮೆ ಸರ್ಕಾರದ ಗಮನ ಸೆಳೆದಿದೆ

Spread the love

ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಎದುರೇ ವಾಲ್ಮೀಕಿ ಸಮುದಾಯ ಮೀಸಲಾತಿಗಾಗಿ ಮತ್ತೊಮ್ಮೆ ಸರ್ಕಾರದ ಗಮನ ಸೆಳೆದಿದೆ. ಬೆಂಗಳೂರಿನ ಶಾಸಕರ ಭವನದ ವಾಲ್ಮೀಕಿ ತಪೋವನದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಚಿವ ಶ್ರೀರಾಮುಲು ಹಾಗೂ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಿಸಿದರು.

ಇದೇ ಸಂದರ್ಭದಲ್ಲಿ ವಾಲ್ಮೀಕಿ‌ ಪ್ರತಿಮೆಯ ಎದುರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ವಾಲ್ಮೀಕಿ ಜ್ಯೋತಿಯನ್ನು ಸಚಿವ ಶ್ರೀರಾಮುಲು ಅವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಶ್ರೀರಾಮುಲು ಸಮ್ಮುಖದಲ್ಲೇ ಮೀಸಲಾತಿಗಾಗಿ ಹೋರಾಟದ ಘೋಷಣೆ ಕೇಳಿ ಬಂದಿತು. ನಂತರ ಮಾತನಾಡಿದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು, ವಾಲ್ಮೀಕಿ ನಾಯಕ ಜನಾಂಗಕ್ಕೆ ಶೇಕಡಾ 7.5 ಒಳಮೀಸಲಾತಿ ಕಲ್ಪಿಸಬೇಕೆಂಬ ಒತ್ತಾಯವನ್ನು ಪ್ರಸ್ತಾಪಿಸಿದರು.ಪ್ರಸಕ್ತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ನವೆಂಬರ್ 10 ರಿಂದ ಡಿಸೆಂಬರ್ 10ರೊಳಗಾಗಿ ಮೀಸಲು ನಿಗದಿ ಮಾಡಿ ಆದೇಶ ಹೊರಡಿಸುವುದಾಗಿ ಸರ್ಕಾರ ಭರವಸೆ ನೀಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ