Breaking News

ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ : ಮೂರು ದಿನದಿಂದ ಇದೇ ಟ್ಯಾಂಕ್‌ ನ ನೀರನ್ನು ನಿವಾಸಿಗಳು ಇದೇ ನೀರನ್ನು ಸೇವಿಸಿದ್ದಾರೆ.

Spread the love

ಬೆಂಗಳೂರು: ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕನ್ಯೂ ಟೌನ್ ನ ನಾಲ್ಕನೆ ಹಂತದಲ್ಲಿ ಘಟನೆ ನಡೆದಿದೆ. ಶುಕ್ರವಾರದಿಂದ ಕಾಣೆಯಾಗಿದ್ದ ಮಹಿಳೆ ಅಪಾರ್ಟ್ಮೆಂಟ್ ನ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದ್ದಾರೆ.

ಶುಕ್ರವಾರ ಕಾಣೆಯಾದ ನಂತರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಹಣಕಾಸಿನ‌ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭಾನುವಾರ ಮಹಿಳೆಯ ಶವ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ.

ಆದರೆ ಕಳೆದ ಮೂರು ದಿನದಿಂದ ಇದೇ ಟ್ಯಾಂಕ್‌ ನ ನೀರನ್ನು ನಿವಾಸಿಗಳು ಇದೇ ನೀರನ್ನು ಸೇವಿಸಿದ್ದಾರೆ. ಸ್ನಾನಕ್ಕೆ, ಕುಡಿಯುವುದಕ್ಕೆ ಮನೆ‌ ಕೆಲಸಕ್ಕೆ ಎಲ್ಲಾದಕ್ಕು ಇದೇ ನೀರು ಬಳಸಿದ್ದು ಆತಂಕ ಮೂಡಿಸಿದೆ

ಸುಮಾರು ಆರವತ್ತಕ್ಕೂ ಅಧಿಕ ಮಂದಿ ಈ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದಾರೆ.ಮೃತ ದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಮಹಿಳೆಗೆ ಕರೋನಾ‌ ಇದ್ಯಾ ಇಲ್ವಾ ಎಂಬುದರ ಬಗ್ಗೆ ತಪಾಸಣೆ ಮಾಡಲಾಗುತ್ತಿದೆ. ಘಟನೆಯ ಸಂಬಂಧ ಯಲಹಂಕನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ