Breaking News
Home / ಜಿಲ್ಲೆ / ನಾಳೆಯಿಂದಲೇ ಅಂಗನವಾಡಿಯಿಂದ 5ನೇ ತರಗತಿವರೆಗೆ ರಜೆ ಘೋಷಣೆ

ನಾಳೆಯಿಂದಲೇ ಅಂಗನವಾಡಿಯಿಂದ 5ನೇ ತರಗತಿವರೆಗೆ ರಜೆ ಘೋಷಣೆ

Spread the love

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ 5ನೇ ತರಗತಿವರೆಗೆ ರಜೆ ಘೋಷಿಸಲಾಗಿದೆ.

ಕೊರೋನಾ ಸೋಂಕಿತ ವ್ಯಕ್ತಿ ಮತ್ತು ಪತ್ನಿ, ಮಗು ಹಾಗೂ ಚಾಲಕನಿಗೆ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 10 ವರ್ಷದೊಳಗಿನ ಮಕ್ಕಳಿಗೆ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವ ಕಾರಣ ಸೋಂಕು ತಗುಲಿದರೆ ಬೇಗನೆ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಮಾರ್ಚ್ 10 ರಿಂದ 17 ರವರೆಗೆ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ರಜೆ ಘೋಷಣೆ ಮಾಡಲಾಗಿದೆ.

ಇನ್ನು ಎಲ್ಕೆಜಿ-ಯುಕೆಜಿಯಿಂದ 5 ನೇ ತರಗತಿವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಭಾಗದ ನರ್ಸರಿಯಿಂದ 5 ನೇ ತರಗತಿವರೆಗೆ ನಾಳೆಯಿಂದಲೇ ರಜೆ ಘೋಷಿಸಲಾಗಿದೆ
ಪರೀಕ್ಷೆ ಸಮಯ ಇದಾಗಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ