Breaking News

ಸಚಿವ ಸ್ಥಾನ ಆಕಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದೆ

Spread the love

ಬೆಂಗಳೂರು : ಬಹುದಿನಗಳಿಂದ ಕಗ್ಗಂಟಾಗಿದ್ದ ಸಚಿವ ಸಂಪುಟ ವಿಸ್ತರಣೆ ಮುಕ್ತಾಯವಾಗಿದ್ದು, 7 ಜನರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಮತ್ತೊಂದೆಡೆ ಸಚಿವ ಸ್ಥಾನ ಆಕಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಮತ್ತೊಂದಷ್ಟು ಅಸಮಾಧಾನಗಳು ಸೃಷ್ಟಿಯಾಗಿವೆ. ಅವುಗಳನ್ನ ಸಮಾಧಾನಪಡಿಸುವ ಕಾರ್ಯವು ಸಹ ನಡೆದಿದೆ.

 

ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಐದಾರು ಗಂಟೆಯಲ್ಲೇ ನಾಗೇಶ್‌ಗೆ ಮಹತ್ವದ ಹುದ್ದೆ

ಹೌದು…ಸಚಿವ ಸ್ಥಾನವನ್ನು ವಾಪಸ್ ಪಡೆದಿರುವುದಕ್ಕೆ ನಾಗೇಶ್ ಅಸಮಾಧಾನಗೊಂಡಿದ್ದಾರೆ. ಇನ್ನು ಹೇಳಿದಂತೆ ಸಚಿವ ಸ್ಥಾನ ಕೊಟ್ಟಿಲ್ಲವೆಂದು ಮುನಿರತ್ನ ಅವರು ಬೇಸರದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಇಬ್ಬರು ನಾಯಕರನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಬಳಿ ಕರೆದುಕೊಂಡು ಹೋಗಿ ಸಮಧಾನಪಡಿಸುವ ಕೆಲಸವನ್ನು ಸಚಿವ ಸುಧಾಕರ್ ಮಾಡಿದರು.ಕೆಕೆ ಗೆಸ್ಟ್ ಹೌಸ್ ನಲ್ಲಿ ಇಬ್ಬರು ಅಸಮಾಧಾನಿತರನ್ನ ಪ್ರತ್ಯೇಕವಾಗಿ ಮಾತನಾಡಿಸಿದ ಅರುಣ್ ಸಿಂಗ್, ಇಬ್ಬರನ್ನೂ ಪ್ರತ್ಯೇಕವಾಗಿ ಕೂರಿಸಿಕೊಂಡು ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ ಮಾನ ಪಕ್ಷದಲ್ಲಿ ಸಿಗಲಿದೆ ಎಂದು ಸಮಾಧಾನ ಮಾಡಿದರು. ಬಳಿಕ ಅರುಣ್ ಸಿಂಗ್ ದೆಹಲಿಗೆ ಹೊರಟರು


Spread the love

About Laxminews 24x7

Check Also

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಮಗ್ರ ಸಿದ್ಧತೆ:D.C.

Spread the loveಬೆಳಗಾವಿ: ರಾಜ್ಯಾದ್ಯಂತ ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ