Breaking News

ಬಿಜೆಪಿ ಸರ್ಕಾರ ಬಂದಾಗಲೆಲ್ಲ ಅವರೇ ಸಚಿವರಾಗಬೇಕಾ : ರೇಣುಕಾಚಾರ್ಯ

Spread the love

ಬೆಂಗಳೂರು : ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವು ಸಚಿವರು ಶಾಸಕರ ಫೋನ್ ಸಹ ರಿಸೀವ್ ಮಾಡಲ್ಲ. ಶಾಸಕರು ಪತ್ರವನ್ನು ಕೊಟ್ಟರೆ ಸಚಿವರು ಉತ್ತರ ಕೊಡಬೇಕು. ಆದ್ರೆ ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇದು ನಮಗೆ ಬೇಜಾರ ಆಗುತ್ತೆ ಅವಮಾನ ಆಗುತ್ತೇ. ಇಂಥ ಸಚಿವರು ಬೇಕಾ? ಎಂದು ರೇಣುಕಾಚಾರ್ಯ ಕೆಲ ಸಚಿವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.ಸಚಿವ ಸಂಪುಟದಲ್ಲಿ ಈಗ 4 ಸಚಿವ ಸ್ಥಾನಗಳು ಖಾಲಿ ಇವೆ. ಹಲವು ಬಾರಿ ಸಚಿವರಾದವರು ತಾವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮಾರ್ಚ್‌ನಲ್ಲಿ ಸಂಪುಟ ವಿಸ್ತರಣೆ ಬೇಡ, ಈಗಲೇ ಮಾಡಲಿ. ಅಗತ್ಯ ಬಿದ್ದರೆ ನಾವು ದೆಹಲಿಗೂ ಹೋಗುತ್ತೇವೆ. ಈ ವಿಚಾರ ನಾನು ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಮಾತಾಡಿದ್ದೇವೆ. ಹೊಸಬರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒಂದಾಗಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ? ನಮಗೆ ಸಚಿವ ಸ್ಥಾನ ಕೊಟ್ಟು ನೋಡಲಿ. ಅದನ್ನು ಮಾಡಿ ತೊರಿಸುವ ತಾಕತ್ತು ಇದೆ. ಇದು ಚುನಾವಣೆ ವರ್ಷ ವಿಳಂಬ ಮಾಡಿ ಸಚಿವ ಸ್ಥಾನ ಕೊಟ್ಟರೇ ಉಪಯೋಗವಿಲ್ಲ. ಕೊಡುವುದಿದ್ದರೇ ಬೇಗ ಕೊಡಿ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.ಇನ್ನು ಬಿ.ವೈ.ವಿಜಯೇಂದ್ರ ಪರ ಬ್ಯಾಟಿಂಗ್ ಮಾಡಲ್ಲ. ಅವರಿಗೆ ಅವರದ್ದೆ ಆದ ವರ್ಚಸ್ಸು ಇದೆ. ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಆದ್ರೆ ಹೊಸ ಮುಖಗಳಿವೆ ಅವಕಾಶ ನೀಡಿ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಅನುಕೂಲ ಆಗುತ್ತದೆ ಎಂದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ