Breaking News

ಶಾಲೆಗಳಿಗೆ ನೀಡಿದ್ದ ಮಧ್ಯಾಂತರ ರಜೆ ಮುಗಿದಿದೆ ಶಿಕ್ಷಕರು ಶಾಲೆಗೆ ಬರಬೇಕು ಶಿಕ್ಷಣ ಇಲಾಖೆ ಸೂಚನೆ

Spread the love

ಬೆಂಗಳೂರು: ಶಾಲೆಗಳಿಗೆ ನೀಡಿದ್ದ ಮಧ್ಯಾಂತರ ರಜೆ ಮುಗಿದಿದ್ದು, ಕನ್ನಡ ರಾಜ್ಯೋತ್ಸವ ಆಚರಣೆಗೆ ನ.1ರಂದು ಎಲ್ಲ ಶಿಕ್ಷಕರು ಹಾಜರಾಗಬೇಕು, 2ರಿಂದ ಶಿಕ್ಷಕರು ಶಾಲೆಗೆ ಬರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಶಾಲಾರಂಭಕ್ಕೆ ಸಂಬಂಧಿಸಿ ಶಿಕ್ಷಣ ಇಲಾಖೆ ಅಥವಾ ಸರಕಾರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ವಿದ್ಯಾಗಮವೂ ತಾತ್ಕಾಲಿಕವಾಗಿ ರದ್ದಾಗಿದೆ. ಹೀಗಾಗಿ ಶಿಕ್ಷಕರು ಶಾಲೆಗೆ ಬಂದು ಯಾವ ಕಾರ್ಯ ಮಾಡಬೇಕು ಎಂಬುದನ್ನು ಇಲಾಖೆ ಸ್ಪಷ್ಟಪಡಿಸಬೇಕು ಎಂದು ಶಿಕ್ಷಕರು ಆಗ್ರಹಿಸಿದ್ದಾರೆ.

ವಿದ್ಯಾಗಮ ಚಟುವಟಿಕೆಯಲ್ಲಿ ಈವರೆಗೆ ಭಾಗಿಯಾಗಿರುವ ವಿದ್ಯಾರ್ಥಿಗಳ ಕಲಿಕಾ ಸಾಧನೆ ಏನು ಮತ್ತು ಕಲಿಕೆಯಲ್ಲಿನ ಕೊರತೆ ಏನು ಎಂಬುದನ್ನು ಪಟ್ಟಿ ಮಾಡಬೇಕು. ಶಾಲಾರಂಭದ ಬಳಿಕ ಕಲಿಕಾ ಕೊರತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ವಿಶೇಷ ಗಮನ ಹರಿಸಲು ಸಾಧ್ಯವಾಗುತ್ತದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ