Breaking News

ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ವಿಷಮಿಸಿದ್ದು, ಕೆಲ ಹೊತ್ತಲ್ಲೇ ಎಂಜಿಎಂ ಆಸ್ಪತ್ರೆಯಿಂದ ಮತ್ತೊಂದು ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ.

Spread the love

ಚೆನ್ನೈ: ಖ್ಯಾತ ಗಾಯಕ, ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ವಿಷಮಿಸಿದ್ದು, ಕೆಲ ಹೊತ್ತಲ್ಲೇ ಎಂಜಿಎಂ ಆಸ್ಪತ್ರೆಯಿಂದ ಮತ್ತೊಂದು ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಗಾಯಕನ ಕೋಟ್ಯಂತರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿದೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೆ.5ರಂದು ವೈದ್ಯರ ಸಲಹೆ ಮೇರೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ತೊಂದರೆ ಹಾಗೂ ವಿವಿಧ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಗುಣಮುಖರಾಗಿದ್ದಾರೆ ಎಂದು ಹೇಳಲಾಗಿತ್ತು. ಆದರೂ ನುರಿತ ವೈದ್ಯರಿಂದ ಚಿಕಿತ್ಸೆ ಮುಂದುವರೆದಿತ್ತು. ಆದರೆ ಎಂಜಿ ಎಂ ಆಸ್ಪತ್ರೆ ನಿನ್ನೆ ರಾತ್ರಿ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಎಸ್ ಪಿಬಿ ಆರೋಗ್ಯ ಚಿಂತಜನಕವಾಗಿದೆ ಎಂದು ತಿಳಿಸಿತ್ತು.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ