Breaking News

ಅತ್ತೆ ತಲೆಗೆ ಸೊಸೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಅಮಾನುಷವಾಗಿ ಕೊಂದ ಘಟನೆ

Spread the love

ಚಳ್ಳಕೆರೆ: ಮನೆಯಲ್ಲಿ ಮಲಗಿದ್ದ ಅತ್ತೆ ತಲೆಗೆ ಸೊಸೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಅಮಾನುಷವಾಗಿ ಕೊಂದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ಸಂಭವಿಸಿದೆ.

ರುದ್ರಮ್ಮ(60) ಮೃತ ದುರ್ದೈವಿ. ಇವರ ಸೊಸೆ ಮುದ್ದಕ್ಕ ಕೊಲೆ ಆರೋಪಿ.

ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇರಲಿಲ್ಲ. ಆಗಾಗ್ಗೆ ಇವರಿಬ್ಬರ ನಡುವೆ ಜಗಳ ನಡೆಯುತ್ತಿತ್ತು. ಜ.22ರ ರಾತ್ರಿಯೂ ಗಲಾಟೆ ಆಗಿತ್ತು.

ಅಂದು ರಾತ್ರಿ ಮನೆಯಲ್ಲಿ ಮಲಗಿದ್ದ ಅತ್ತೆ ರುದ್ರಮ್ಮಳ ತಲೆಗೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಸೊಸೆ ಮುದ್ದಕ್ಕ ಕೊಲೆ ಮಾಡಿದ್ದಾಳೆ. ಅತ್ತೆಯ ಸಾವಲ್ಲಿ ಜಗಳ ಅಂತ್ಯವಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಪತ್ನಿಯನ್ನು ಕೊಂದ ಸೊಸೆ ವಿರುದ್ಧ ಮೃತಳ ಪತಿ ಕೆಂಚಪ್ಪ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದು, ಮುದ್ದಕ್ಕಳನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ