ಚಾಮರಾಜನಗರ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಊರಿಗೆ ಹೋಗಲಾಗದೆ ಹತಾಶೆಗೊಂಡಿದ್ದ ಕೇರಳದ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.
ಅಂಜುಂ (35) ಆತ್ಮಹತ್ಯೆ ಶರಣಾದ ವ್ಯಕ್ತಿ. ಕೇರಳದ ಮಲ್ಲಪ್ಪುರಂನ ನಿವಾಸಿ ಅಂಜುಂ ಇಲ್ಲಿನ ಕೆಎಸ್‍ಆರ್ ಟಿಸಿ ಬಳಿ ಇರುವ ಮಯೂರು ಹೋಟೆಲ್‍ನಲ್ಲಿ ಕೆಲಸ ಮಾಡಿಕೊಂಡಿದ್ದನು. ಆದ್ರೆ ಕೊರೊನಾದಿಂದ ಲಾಕ್ ಡೌನ್ ಘೋಷಣೆಯಾದ ಬಳಿಕ ಊರಿಗೆ ತೆರಳಲು ಆಗಲಿಲ್ಲ. ಇದರಿಂದ ಹತಾಶೆಗೊಂಡಿದ್ದ ವ್ಯಕ್ತಿಗುರುವಾರ ರಾತ್ರಿ ಹೋಟೆಲ್ ರೂಮ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.
ಸ್ಥಳಕ್ಕೆ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರುಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Laxmi News 24×7