ಚೆನ್ನೈ: ತಮಿಳುನಾಡಿನ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿ ಗುದನಾಳಗಳಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಪೇಸ್ಟ್ ರೂಪದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಚೆನ್ನೈಗೆ ಆಗಮಿಸಿದ ನಾಲ್ವರು ಪ್ರಯಾಣಿಕರು ಚಿನ್ನದ ಪೇಸ್ಟ್ ಇಟ್ಟುಕೊಂಡು ಸಾಗಿಸುತ್ತಿದ್ದರು. ಇದರ ಮೌಲ್ಯ 45.5 ಲಕ್ಷ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
864 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಚಿನ್ನ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ವಿಧಾನಗಳ ಮೂಲಕ ಹೊರತೆಗೆಯಲಾಗಿದೆ.
Laxmi News 24×7