Breaking News

ಖ್ಯಾತ ನಟಿ ಖುಷ್ಬೂ ಅರೆಸ್ಟ್

Spread the love

ಚೆನ್ನೈ: ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಪರ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಖುಷ್ಬೂ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಸಿಕೆ ನಾಯಕ ತಿರುಮಾಳವನ್ ಬಂಧನಕ್ಕೆ ಆಗ್ರಹಿಸಿ ಚಿದಂಬರಂನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಪೊಲೀಸರು ನಟಿ ಖುಷ್ಬೂ ಅವರನ್ನು ಚೆನ್ನೈನ ಇಸಿಆರ್ ರಸ್ತೆಯಲ್ಲಿ ಬಂಧಿಸಿದ್ದಾರೆ.

ಮುಂಜಾಗೃತಾ ಕ್ರಮವಾಗಿ ನಟಿ ಖುಷ್ಬೂ ಸೇರಿದಂತೆ ಹಲವು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು‌ ಬಂದಿದೆ.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ