ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಕಾಯ್ದೆಗಳ ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿರೋಧಿಸಿ ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್ ಬೆಂಬಲಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು.
ರಾಜ್ಯ ರೈತ ಸಂಘದ ವಿವಿಧ ಬಣಗಳು, ಕೇಂದ್ರಿಯ ಕಾರ್ಮಿಕ ಸಂಘಟನೆಗಳಾದ ಎಐಟಿಯುಸಿ ( ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್), ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯ ವೇದಿಕೆ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ, ಕನ್ನಡಪರ ಸಂಘಟನೆಗಳು ಸೇರಿ 20ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ನಲ್ಲಿ ಪಾಲ್ಗೊಂಡಿವೆ. ಸಿಪಿಎಂ, ಕಾಂಗ್ರೆಸ್, ಜೆಡಿಎಸ್, ಪ್ರಜಾ ಸಂಘರ್ಷ ಸಮಿತಿ ಪಕ್ಷಗಳು ಕೂಡ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.
ನಗರದಲ್ಲಿ ಸೋಮವಾರ ಬೆಳಿಗ್ಗೆ 5.3O ರ ಸುಮಾರಿಗೆ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಸಾಗಿದರು.