Breaking News

ಚಿಕ್ಕೋಡಿ ಪೊಲೀಸ್ ಠಾಣೆ ಪೇದೆ ಓರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ

Spread the love

ಚಿಕ್ಕೋಡಿ: ಕರ್ತವ್ಯ ಮುಗಿಸಿ ಊರಿಗೆ ತೆರಳುತ್ತಿದ್ದ ಚಿಕ್ಕೋಡಿ ಪೊಲೀಸ್ ಠಾಣೆ ಪೇದೆ ಓರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳ್ಳಿ ಗ್ರಾಮದ ಹತ್ತಿರ ಗುರುವಾರ ಸಂಭವಿಸಿದೆ.


ಮೃತ ಪೇದೆ ರಮೇಶ ನಾಯಿಕ(೨೫) ಎಂದು ಗುರ್ತಿಸಲಾಗಿದೆ. ಈತನು ಕರ್ತವ್ಯ ಮುಗಿಸಿ ದ್ವಿಚಕ್ರ ವಾಹನದ ಮೂಲಕ ತನ್ನ ಊರು ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮಕ್ಕೆ ತೆರಳುವಾಗ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯ ನಾಗರಮುನ್ನೋಳ್ಳಿ ಗ್ರಾಮ ವ್ಯಾಪ್ತಿಯ ಬೆಳಗಲಿ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪೇದೆ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಬರುವ ೧೯ ರಂದು ಪೇದೆ ರಮೇಶನ ಮದುವೆ ನಿಶ್ಚಯಿಸಿದರು. ಆದರೆ ಗುರುವಾರ ಸಂಜೆ ನಡೆದ ದುರ್ಘಟನೆ ಪೇದೆಯನ್ನು ಬಲಿ ಪಡೆದುಕೊಂಡಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲಿಸಿದರು.
ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು

Spread the loveಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ