Breaking News

ಬೆಳಗಾವಿ ಲೋಕಸಭೆ ಚುನಾವಣೆ ದಿ.ಸುರೇಶ ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೇ ಕಾಂಗ್ರೆಸ್ ಬಿಜೆಪಿ ಯಾರೇ ಟಿಕೆಟ್ ನೀಡಿದರೂ ಸ್ಪರ್ಧಿಸಲು ಸಿದ್ದ- ಪ್ರಕಾಶ ಹುಕ್ಕೇರಿ

Spread the love

 

ಚಿಕ್ಕೋಡಿ: ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸುರೇಶ ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೇ ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೊಸ ಬಾಂಬ್ ಸಿಡಿಸಿದರು.
ಚಿಕ್ಕೋಡಿ ತಾಲೂಕಿನ ಪ್ಯಾಕ್ಟರಿ ಕ್ರಾಸ್ ಬಳಿ ಪೆಟ್ರೋಲ್ ಬಂಕ್ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಸುರೇಶ ಅಂಗಡಿ ಬಿಜೆಪಿಯಲ್ಲಿ ಇದ್ದರೇ ನಾನು ಕಾಂಗ್ರೆಸ್ ದಲ್ಲಿ ಇದ್ದೇನೆ. ಆದರೆ ಇಬ್ಬರು ನಾವು ಗಳಸಗಂಟ ಸ್ನೇಹಿತರು. ಇಂದು ಸ್ನೇಹಿತ ನಮ್ಮ ಜೊತೆ ಇಲ್ಲದೇ ಇರುವುದು ದುಃಖದ ಸಂಗತಿ.
ದಿ.ಸುರೇಶ ಅಂಗಡಿ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದರೆ ನಾನು ಯಾವ ಪಕ್ಷದಿಂದ ಟಿಕೆಟ್ ಕೇಳುದಿಲ್ಲ. ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸಲು ಸಿದ್ದನಿದ್ದೇನೆ. ಕಾಂಗ್ರೆಸ್ ಅಥವಾ ಬಿಜೆಪಿ ಯಾರೇ ಟಿಕೆಟ್ ಕೊಟ್ಟರು ಸ್ಪರ್ಧಿಸಲು ಸೈ ಎಂದರು.
ನಾನು ರಾಜಕೀಯದಿಂದ ನಿವೃತ್ತಿಯಾಗಿಲ್ಲ. ಜನಸೇವೆ ಮಾಡುವ ಶಕ್ತಿಯನ್ನು ಭಗವಂತ ನೀಡಿದ್ದಾನೆ ಎಂದರು.
ಬೆಳಗಾವಿ ಲೋಕಸಭೆ ಕ್ಷೇತ್ರ ನನಗೆನು ಹೊಸದೇನಲ್ಲ.ಜಿಲ್ಲಾ ಉಸ್ತುವಾರಿ ಸಚಿವನಾಗಿ.ವಿಧಾನ ಪರಿಷತ್ ಸದಸ್ಯನಾಗಿ ಸಾಕಷ್ಟು ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಎಂದರು.
ಬಿಜೆಪಿ ಪಕ್ಷದಿಂದ ದಿ.ಸುರೇಶ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಿದರೇ ನಾನೇ ಜವಾಬ್ದಾರಿ ಹೊತ್ತುಕೊಂಡು ಗೆಲುವಿಗೆ ಶ್ರಮೀಸುತ್ತೇನೆ ಎಂದರು.


Spread the love

About Laxminews 24x7

Check Also

ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ

Spread the love ನಿಪ್ಪಾಣಿಯ ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ ಚಿಕ್ಕೋಡಿ:ನಿಪ್ಪಾಣಿ ತಾಲೂಕಿನ ತವಂದಿ ಘಾಟ್‌ನಲ್ಲಿ ಕಂಟೇನರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ