Breaking News

ಅಸಮಾಧಾನ ಇರೋರು ವರಿಷ್ಠರ ಜೊತೆ ಮಾತಾಡಲಿ : ಸಿಎಂ

Spread the love

ಬೆಂಗಳೂರು : ಅಸಮಾಧಾನ ಇರೋರು ಬೇಕಾದ್ರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತನಾಡಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಂಪುಟ ವಿಸ್ತರಣೆ ಬೆನ್ನಲ್ಲೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬಿಜೆಪಿಯ ಕೆಲ ಶಾಸಕರು ಬಹಿರಂಗವಾಗಿಯೇ ಪಕ್ಷದ ವಿರುದ್ಧ ಬೇಸರ ಹೊರಹಾಕುತ್ತಿದ್ದಾರೆ.ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ನಮ್ಮ ಯಾವುದೇ ಶಾಸಕರು ವಿರೋಧ ಇದ್ರೆ ದೆಹಲಿಗೆ ಹೋಗಲಿ.

ವರಿಷ್ಠರಿಗೆ ದೆಹಲಿಗೆ ಹೋಗಿ ದೂರು ಕೊಡಲಿ.

ಇಲ್ಲಿ ಬಹಿರಂಗವಾಗಿ ಮಾತನಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಯಾವ ಶಾಸಕರು ಮಾಡಬಾರದು. ವರಿಷ್ಠರು ಸರಿ ತಪ್ಪು ಯಾವುದು ಅಂತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.


Spread the love

About Laxminews 24x7

Check Also

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Spread the loveಬೆಂಗಳೂರು: ಡಿ.ಕೆ.ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ 6 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಪಕ್ಷದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ