ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 176 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ.
ಕರುನಾಡಿಗೆ ರವಿವಾರ ಕಂಟಕವಾಗಿದೆ. ಇಪ್ಪತ್ತಾಲ್ಕು ಗಂಟೆಯಲ್ಲಿ 176 ಜನರಿಗೆ ಸೋಂಕು ತಗುಲಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಂದ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದೆ.
ಸಧ್ಯ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇಂದು 312 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ3955 ಒಟ್ಟು ಮಂದಿ ಗುಣಮುಖರಾಗಿದ್ದಾರೆ.ಇಲ್ಲಿಯವರೆಗೆ 86 ಜನರು ಕೊರೊನಾಗೆ ಬಲಿಯಾಗಿದ್ದಾರೆ
 Laxmi News 24×7
Laxmi News 24×7
				 
		 
						
					 
						
					 
						
					