Breaking News

ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ.

Spread the love

ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ.

ಸದ್ಯ ಶಾಸಕರು ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿರುವ ದಿನೇಶ್​ ಗುಂಡೂರಾವ್​, ‘ನನಗೆ ಕೋವಿಡ್​ ರೋಗಲಕ್ಷಣ ಇಲ್ಲರಲ್ಲ. ಆದರೆ ಕೋವಿಡ್ ಟೆಸ್ಟ್​ನ ವರದಿ ಪಾಸಿಟಿವ್​ ಬಂದಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೋವಿಡ್​ ಟೆಸ್ಟ್ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆದಿನೇಶ್ ಗುಂಡೂರಾವ್​ ಅವರು ಶನಿವಾರ ಸದನಕ್ಕೆ ಹಾಜರಾಗಿದ್ದರು, ಹಾಗಾಗಿ ಸಹಜವಾಗಿಯೇ ಇವರ ಸಂಪರ್ಕಕ್ಕೆ ಬಂದವರಲ್ಲಿ ಕರೊನಾ ಭೀತಿ ಆವರಿಸಿದೆ.ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕರೊನಾ ಸೋಂಕಿನ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಸುತ್ತಿದೆ. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಸಾವು-ನೋವನ್ನು ತಂದೊಡ್ಡಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ