Breaking News
Home / ಜಿಲ್ಲೆ / ಬೆಳಗಾವಿಯಲ್ಲಿ ಮತ್ತೊಂದು ಕೊರೋನಾ ಪ್ರಕರಣ ದೃಢಪಟ್ಟಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 18ಕ್ಕೇರಿದೆ.

ಬೆಳಗಾವಿಯಲ್ಲಿ ಮತ್ತೊಂದು ಕೊರೋನಾ ಪ್ರಕರಣ ದೃಢಪಟ್ಟಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 18ಕ್ಕೇರಿದೆ.

Spread the love

 

ಬೆಳಗಾವಿ :ರಾಜ್ಯದಲ್ಲಿ ಇಂದು 11 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೆ 258ಕ್ಕೇರಿದೆ. 9 ಜನರು ಸಾವನ್ನಪ್ಪಿದ್ದಾರೆ.

ಇಂದು ಬಾಗಲಕೋಟೆ ಮತ್ತು ಕಲಬುರ್ಗಿಯಲ್ಲಿ ತಲಾ 3 ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 2, ಚಿಕ್ಕಬಳ್ಳಾಪುರ, ಬೆಳಗಾವಿ ಹಾಗೂ ವಿಜಯಪುರದಲ್ಲಿ ತಲಾ ಒಂದು ಪ್ರಕರಣ ಇಂದು ದಾಖಲಾಗಿದೆ.

ಬೆಳಗಾವಿಯಲ್ಲಿ ದೃಢಪಟ್ಟಿರುವ 33 ವರ್ಷದ ಪುರುಷ ದೆಹಲಿಗೆ ಹೋಗಿ ಬಂದಿದ್ದ ಎನ್ನುವುದು ಗೊತ್ತಾಗಿದೆ. ಆದರೆ ಆತ ಯಾವ ಪ್ರದೇಶದವನು ಎನ್ನುವುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾಗಿರುವ ಎಲ್ಲ 18 ಪ್ರಕರಣಗಳೂ ದೆಹಲಿಗೆ ಹೋಗಿ ಬಂದಿರುವ, ಇಲ್ಲವೇ ಅವರೊಂದಿಗೆ ಸಂಪರ್ಕ ಹೊಂದಿದವರದ್ದೇ ಆಗಿದೆ.


Spread the love

About Laxminews 24x7

Check Also

ಆರ್ಥಿಕ‌ ಹೊರೆ ಹಿನ್ನೆಲೆ: ಕೃಷಿ ಪಂಪ್​ ಸೆಟ್‌ಗಳ ಮೂಲಸೌಕರ್ಯ ವೆಚ್ಚ ಭರಿಸುವ ಪ್ರಸ್ತಾವನೆ ಮುಂದೂಡಿದ ಸಂಪುಟ ಸಭೆ

Spread the loveಬೆಳಗಾವಿ: ಕೃಷಿ ಪಂಪ್​ ಸೆಟ್‌ಗಳಿಗೆ ಮೂಲಸೌಕರ್ಯ ಒದಗಿಸುವ ವೆಚ್ಚನ್ನು ರೈತರೇ ಭರಿಸಬೇಕು ಎಂಬ ಆದೇಶ ಪರಿಷ್ಕರಿಸುವ ಪ್ರಸ್ತಾವನೆ ಸಂಬಂಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ