ಬೆಳಗಾವಿ, ಏ.೨(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಒಟ್ಟು ಆರು ಮಾದರಿಗಳ ಪೈಕಿ ಎಲ್ಲ ಆರೂ ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಿಂದ ಇದುವರೆಗೆ ಒಟ್ಟು ೨೭ ಮಾದರಿಗಳನ್ನು ಕಳಿಸಲಾಗಿತ್ತು. ಇಂದು ಬಂದಿರುವ ವರದಿಯ ಪ್ರಕಾರ ಎಲ್ಲ ೨೭ ಮಾದರಿಗಳು ನೆಗೆಟಿವ ಬಂದಿರುತ್ತವೆ ಎಂದು ತಿಳಿಸಿದ್ದಾರೆ.
ಇದುವರೆಗೆ ೨೧ ಮಾದರಿಗಳ ವರದಿ ನೆಗೆಟಿವ್ ಬಂದಿದ್ದು, ಇಂದಿನ ಆರು ಪ್ರಕರಣಗಳ ವರದಿ ಕೂಡ ನೆಗೆಟಿವ್ ಬಂದಿರುತ್ತವೆ.
ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ವರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.
Laxmi News 24×7