Breaking News

ನಾಳೆಯಿಂದ ಗೋಕಾಕನಗರದಲ್ಲಿ ಮನೆ ಮನೆಗೆ ಬರಲಿದೆ ಆರೋಗ್ಯ ತಪಾಸಣಾ ತಂಡ

Spread the love

ಗೋಕಾಕ:ಗೋಕಾಕನಗರಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಮನೆಯ ಪ್ರತಿ ವ್ಯಕ್ತಿಯ ವೈದ್ಯಕೀಯ ತಪಾಸಣೆ ಕಾರ್ಯವನ್ನು ನಾಳೆಯಿಂದ ಪ್ರಾರಂಭಿಸಲಾಗುವುದು. ನಿರಂತರ ಆರೋಗ್ಯ ತಪಾಸಣೆಯನ್ನು ನಗರದ ವಾರ್ಡ್ ವಾರು ಕಾರ್ಯಪಡೆಯ ಸದಸ್ಯರು ಪ್ರತಿ ಮನೆಗೆ ಬೇಟಿ ಕೊಟ್ಟು ಎಲ್ಲ ರೀತಿಯ ಅನಾರೋಗ್ಯದ ಬಗ್ಗೆ ತಪಾಸಣೆ ಮಾಡಿ ವಿವರಗಳನ್ನು ದಾಖಲಿಸಿಕೊಳ್ಳಲು ತಿಳಿಸಲಾಗಿದೆ.

ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರನ್ನು ಒಳಗೊಂಡ ತಂಡವು ತಪಾಸಣಾ ಕಾರ್ಯವನ್ನು ಜರುಗಿಸಲಿದ್ದು, 3 ದಿನಗಳ ಒಳಗಾಗಿ ಪೂರ್ಣಗೊಳಿಸಲು ತಿಳಿಸಲಾಗಿದೆ. ಈ ಬಗ್ಗೆ ಇಂದು ಮಾನ್ಯ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಂಡದ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ನಡೆಸಲಾಯಿತು.

Covid-19 ರೋಗಾಣು ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ನಿರಂತರ ಆರೋಗ್ಯ ತಪಾಸಣೆಯನ್ನು ಜರುಗಿಸಲಾಗುವುದು.
ಈ ನಿಟ್ಟಿನಲ್ಲಿ ಗೋಕಾಕ್ ನಗರದ ಸಾರ್ವಜನಿಕರು ತಂಡದ ಸದಸ್ಯರಿಗೆ ಸೂಕ್ತ ಮಾಹಿತಿ ಕೊಡುವುದರ ಜೊತೆಗೆ ಸಂಪೂರ್ಣ ಸಹಕಾರ ನೀಡಲು ಕೋರಲಾಗಿದೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ