Breaking News

ಕೋವಿಡ್-೧೯: ಇಬ್ಬರು ಮಹಿಳೆಯರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

Spread the love

ಬೆಳಗಾವಿ, ಏ.30(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಇಬ್ಬರು ಮಹಿಳೆಯರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ 67 ವರ್ಷದ (ಪಿ-149) ಮತ್ತು 36 ವರ್ಷದ(ಪಿ-147) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.
ಇವರು ಕ್ರಮವಾಗಿ ಏ.1 ಹಾಗೂ ಮಾ.31 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 69 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಇದೀಗ ಒಟ್ಟಾರೆ ಹತ್ತು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.


Spread the love

About Laxminews 24x7

Check Also

ಸಾಲ ಮಾಡಿ ಬಜೆಟ್‌ ಮಂಡಿಸಿದ್ದು ಇದೇ ಮೊದಲ ಬಾರಿಯಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Spread the loveಕಳೆದ ಐವತ್ತು ವರ್ಷದಿಂದ ಸಾಲ ಮಾಡಿಯೇ ಬಜೆಟ್‌ ಮಂಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರಷ್ಟೇ ಸಾಲ ಮಾಡಿ ಬಜಟ್‌ ಮಂಡನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ