ಬೆಳಗಾವಿ, ಏ.30(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಇಬ್ಬರು ಮಹಿಳೆಯರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ 67 ವರ್ಷದ (ಪಿ-149) ಮತ್ತು 36 ವರ್ಷದ(ಪಿ-147) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.
ಇವರು ಕ್ರಮವಾಗಿ ಏ.1 ಹಾಗೂ ಮಾ.31 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 69 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಇದೀಗ ಒಟ್ಟಾರೆ ಹತ್ತು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.