Breaking News

2 ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಇದೀಗ ಆಕೆಯನ್ನು ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಲೆ

Spread the love

ಭೋಪಾಲ್: ಪೋಷಕರ ಒಪ್ಪಿಗೆಯ ನಂತರ ಪ್ರೀತಿಸಿದ್ದ ಯುವತಿಯನ್ನೇ 2 ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಇದೀಗ ಆಕೆಯನ್ನು ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಲೆ ಮಾಡಿ, ಶವದ ಮುಂದೆ ಕುಳಿತು ರೋಧಿಸಿದ್ದಾನೆ.

ಮೊದಲಿಗೆ ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಂದ ಬಳಿಕ ಚೂರಿಯಿಂದ ಮನಸೋ ಇಚ್ಛೆ ಇರಿದಿದ್ದಾನೆ. ಇನ್ನು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಪಕ್ಕ ಕೆಲ ಸಮಯ ಕುಳಿತ ಆರೋಪಿ ನಂತರ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ.

ಪತಿ ಹರ್ಷ ತನ್ನ 22 ವರ್ಷದ ಪತ್ನಿ ಅಂಶು ಶರ್ಮಾಳನ್ನು ಅತೀ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಫ್ಲಾಟ್ ನಲ್ಲಿ ದಂಪತಿ ಇಬ್ಬರೇ ವಾಸವಾಗಿದ್ದು ಸಣ್ಣ ಸಣ್ಣ ವಿಚಾರಕ್ಕೂ ಇಬ್ಬರ ಮಧ್ಯೆ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ್ದಾನೆ.

ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಕೊರೋನಾ ಲಾಕ್ ಡೌನ್ ನಿಂದಾಗಿ ಕಳೆದ ಆಗಸ್ಟ್ 8ರಂದು ಅಂಶು ಮತ್ತು ಹರ್ಷ ದೇವಸ್ಥಾನದಲ್ಲಿ ವಿವಾಹವಾಗಿದ್ದರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಇಬ್ಬರಿಗೂ ಪರಿಚಯವಾಗಿ ನಂತರ ಪ್ರೀತಿಯ ಬಲೆಗೆ ಬಿದ್ದಿದ್ದರು. ಆದರೆ ಇದೀಗ ಎರಡನೇ ತಿಂಗಳಿಗೆ ಹರ್ಷ ಪತ್ನಿಯನ್ನು ಕೊಲೆ ಮಾಡಿದ್ದಾನೆ.


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ