ದಾವಣಗೆರೆ: ಪ್ರೀತಿಸಿದ ಹುಡುಗಿಗೆ ಯುವಕನೊಬ್ಬ ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಸ್ವಾರಸ್ಯಕರ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೇಮಂತ್ ಎಂಬ ಯುವಕ ತಾನು ಪ್ರೀತಿಸಿದ ಯುವತಿಗೆ ನಡು ರಸ್ತೆಯಲ್ಲೇ ತಾಳಿಕಟ್ಟಿದ್ದಾನೆ.
ಹೇಮಂತ್ ಕಳೆದ 4 ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಆದರೆ, ಇವರ ಪ್ರೀತಿಗೆ ಜಾತಿ ಅಡ್ಡಬಂದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಇದಕ್ಕೆ ಒಪ್ಪದೆ ಹೇಮಂತ್ನಿಗೆ ತಮ್ಮ ಜಾತಿಯ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ.
ಸದ್ಯ, ಯುವಕ ಮತ್ತು ಯುವತಿ ಅನ್ಯಜಾತಿಗೆ ಸೇರಿದ್ದವರಾಗಿರುವುದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಚನ್ನಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7