Breaking News

ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು

Spread the love

ದಾವಣಗೆರೆ: ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಸಾರ್ವಜನಿಕ ಆಸ್ಪತ್ರೆ ಎದುರು ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಸರ್ಕಾರಿ ಆಸ್ಪತ್ರೆ ಮುಂದೆ ಬಾಲಕನ ಮೃತದೇಹ ಇಟ್ಟು ಪಾಲಕರ ಪ್ರತಿಭಟನೆ
ಮಹೇಶ್​​-ನೇತ್ರಾವತಿ ದಂಪತಿ ಪುತ್ರ ಮಗ ಭರತ್ (13) ಮೃತ ಬಾಲಕ. ಅನಾರೋಗ್ಯದಿಂದ ಬಳಲುತ್ತಿದ್ದ ಭರತ್​​ನನ್ನು ಪಾಲಕರು ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದರು. ಕರ್ತವ್ಯದಲ್ಲಿದ್ದ ವೈದ್ಯರು ಸಕಾಲಕ್ಕೆ ಬಾಲಕನಿಗೆ ಚಿಕಿತ್ಸೆ ನೀಡದ ಪರಿಣಾಮ ಮಗ ಸಾವನ್ನಪ್ಪಿದ್ದಾನೆ ಎಂದು ಮೃತ ಬಾಲಕನ ಪೋಷಕರು ಆರೋಪಿಸಿದ್ದಾರೆ. ಸಾರ್ವಜನಿಕರಿಗೆ ಸ್ಪಂದಿಸದ ವೈದ್ಯರ ಅಮಾನತಿಗೆ ನೊಂದ ಪಾಲಕರು‌ ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ