ಬೆಂಗಳೂರು: ಮಕರ ಸಂಕ್ರಾಂತಿಯ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಧರ್ಮಪತ್ನಿ ಉಷಾ ಶಿವಕುಮಾರ್ ಜೊತೆಗೂಡಿ ಇಂದು ತಮ್ಮ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು.
ವಿಶೇಷ ಅಂದ್ರೆ ಒಂದೆಡೆ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಗೋಮಾಂಸದ ಕುರಿತು ದಿನಕ್ಕೊಂದು ಹೇಳಿಕೆ ನೀಡುತ್ತಾ ವಿವಾದ ಮೈ ಮೇಲೆ ಎಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ನನಗೆ ಯಾರೂ ಬೆಂಬಲ ನೀಡುತ್ತಿಲ್ಲ.. ಜನರೇ ನನ್ನನ್ನು ಕಾಪಾಡಬೇಕು ಅಂತಾ ಅಲವತ್ತುಕೊಳ್ಳುತ್ತಿದ್ದಾರೆ. ಈನಡುವೆ ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎತ್ತುಗಳಿಗೆ ಪೂಜೆ ಮಾಡಿರೋದು ಸಾಕಷ್ಟು ಕುತೂಹಲ ಮೂಡಿಸಿರೋದು ಸುಳ್ಳಲ್ಲ.
ಇನ್ನು ರಾಜ್ಯದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿರುವ ಡಿಕೆ ಶಿವಕುಮಾರ್, ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿಯ ಶುಭಾಶಯಗಳು.
Laxmi News 24×7