Breaking News

ಡ್ರಗ್ಸ್ ಪ್ರಕರಣದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಒಬ್ಬರನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ

Spread the love

ಮಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಅನೇಕರನ್ನು ಬಂಧಿಸಿ, ಜೈಲಿಗಟ್ಟಿರುವ ಸಿಸಿಬಿ ಪೊಲೀಸರು, ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಇಂದು ಡ್ರಗ್ಸ್ ಪ್ರಕರಣದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಒಬ್ಬರನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ.ಹೀಗೆ ಬಂಧಿಸಲ್ಪಟ್ಟ ಆರೋಪಿಯೇ ಕಿಶೋರ್ ನ ಹಳೆಯ ದೋಸ್ತ್ ಆದಂತ ಸ್ಯಾಂ ಫರ್ನಾಂಡಿಸ್ ಆಗಿದ್ದಾನೆ. ಬಂದಿತ ಆರೋಪಿಯಿಂದ ನಿರೂಪಕಿ ಅನುಶ್ರೀ ಬಗ್ಗೆ ಮತ್ತಷ್ಟು ಸ್ಪೋಟಕ ಮಾಹಿತಿಯನ್ನು ಬಾಯ್ ಬಿಟ್ಟಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.ಬಂಧಿತ ಆರೋಪಿ ಸ್ಯಾಂ ಫರ್ನಾಂಡಿಸ್ ಅನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ ವೇಳೆ ನಿರೂಪಕಿ ಅನುಶ್ರೀ ಕಿಶೋರ್ ನಡೆಸುತ್ತಿದ್ದಂತ ಪಾರ್ಟಿಗಳಲ್ಲಿ ಭಾಗವಹಿಸಿದ್ದನ್ನು ನೋಡಿರುವುದಾಗಿ ಬಾಯ್ ಬಿಟ್ಟಿದ್ದಾನಂತೆ. ಅಲ್ಲದೇ ಅನುಶ್ರೀ ಸೇರಿದಂತೆ ಬೆಳ್ಳಿತೆರೆ, ಕಿರುತೆರೆ ಹಾಗೂ ರಿಯಾಲಿಟಿ ಶೋನ ನಟ, ನಟಿಯರು ಪಾರ್ಟಿಯಲ್ಲಿ ಭಾಗವಹಿಸಿದ್ದರ ಬಗ್ಗೆ ಸ್ಪೋಟಕ ಮಾಹಿತಿಯನ್ನು ತಿಳಿಸಿದ್ದಾನಂತೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ