Breaking News

ಅನುಶ್ರೀ ಮೊಬೈಲ್ ತಪಾಸಣೆ ನಡೆಸಿದಾಗ ಅನುಶ್ರೀ ಕಾಲ್ ಲಿಸ್ಟ್ ನಲ್ಲಿದ್ದ ಹೆಸರು ಕಂಡು ಸ್ವತಃ ಸಿಸಿಬಿ ಅಧಿಕರಿಗಳೇ ದಂಗಾಗಿದ್ದಾರೆ.

Spread the love

ಮಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ನಿರೂಪಕಿ ಅನುಶ್ರೀ ಅವರ ಮೊಬೈಲ್ ಪರಿಶೀಲಿಸಿದ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಪ್ರಕರಣದಲ್ಲಿ ತಮ್ಮ ಹೆಸರು ಹೊರ ಬರುತ್ತಿದ್ದಂತೆಯೇ ಅನುಶ್ರೀ ಪ್ರಭಾವಿ ನಾಯಕರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.

ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಅನುಶ್ರೀಗೆ ನೋಟಿಸ್ ನೀಡುತ್ತಿದ್ದಂತೆಯೇ ಅನುಶ್ರೀ ಮೂವರು ಪ್ರಭಾವಿ ರಾಜಕಾರಣಿಗಳಿಗೆ ಕರೆ ಮಾಡಿದ್ದಾರೆ. ವಿಚಾರಣೆ ವೇಳೆ ಅನುಶ್ರೀ ಮೊಬೈಲ್ ತಪಾಸಣೆ ನಡೆಸಿದಾಗ ಅನುಶ್ರೀ ಕಾಲ್ ಲಿಸ್ಟ್ ನಲ್ಲಿದ್ದ ಹೆಸರು ಕಂಡು ಸ್ವತಃ ಸಿಸಿಬಿ ಅಧಿಕರಿಗಳೇ ದಂಗಾಗಿದ್ದಾರೆ.

ವಿಚಾರಣೆಗೆ ಹಾಜರಾಗುವ ಮುನ್ನ ಅನುಶ್ರೀ, ಮೊದಲು ಮಾಜಿ ಸಿಎಂ ಓರ್ವರಿಗೆ ಕರೆ ಮಾಡಿದ್ದಾರೆ. ಅದಾದ ಬಳಿಕ ಮಾಜಿ ಸಿಎಂ ಪುತ್ರನಿಗೆ ಕರೆ ಮಾಡಿದ್ದಾರೆ.

ನಂತರದಲ್ಲಿ ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಗೂ ಕರೆ ಮಾಡಿದ್ದಾರೆ ಎನ್ನಲಾಗಿದೆ. ಹಾಗಾಗಿ ಅನುಶ್ರೀ ರಕ್ಷಣೆಗೆ ದೊಡ್ಡ ದೊಡ್ಡ ರಾಜಕಾರಣಿಗಳೆ ನಿಂತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಇದೇ ಕಾರಣಕ್ಕೆ ಅನುಶ್ರೀ ಅವರನ್ನು ಎರಡನೇ ಬಾರಿ ವಿಚಾರಣೆಗೆ ಕರೆದಿಲ್ಲ. ಅಲ್ಲದೇ ಡೋಪಿಂಗ್ ಟೆಸ್ಟ್ ಗೂ ಅವರನ್ನು ಒಳಪಡಿಸಿಲ್ಲ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ