Breaking News

ಶಾರುಖ್ ಖಾನ್ ಪುತ್ರನಿಗೆ ಸಿಗದ ಜಾಮೀನು

Spread the love

ಮುಂಬೈ: ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾದ ಪ್ರಕರಣದಡಿ ಬಂಧಿತರಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಮತ್ತೆ ಎನ್.ಸಿ.ಬಿ. ಕಸ್ಟಡಿಗೆ ನೀಡಲಾಗಿದೆ. ಇಂದು ವಿಚಾರಣೆ ನಡೆಸಿದ ಮುಂಬೈನ ಕಿಲ್ಲಾ ಕೋರ್ಟ್ ಅಕ್ಟೋಬರ್ 7 ರವರೆಗೆ NCB ಕಸ್ಟಡಿಗೆ ನೀಡಿ ಆದೇಶ ನೀಡಿದೆ.

ಮುಂಬೈ ಗೋವಾ ನಡುವೆ ಸಮುದ್ರದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಶನಿವಾರ ರಾತ್ರಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದರು.

ಇಂದು ಮುಂಬೈನ ಕಿಲ್ಲಾ ಕೋರ್ಟ್ ನಲ್ಲಿ ಜಾಮೀನು ಅರ್ಜಿ, ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಮಾಡಿದ್ದರ ಬಗ್ಗೆ ವಿಚಾರಣೆ ನಡೆದಿದ್ದು, ಆರ್ಯನ್ ಖಾನ್ ಮತ್ತು ಇಬ್ಬರು ಸಹಚರರನ್ನು ಮತ್ತೆ NCB ಕಸ್ಟಡಿಗೆ ನೀಡಲಾಗಿದೆ.


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ