ಜೇವರ್ಗಿ: ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದನ್ನು ವಿರೋಧಿಸಿ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಉಪ ತಹಸೀಳ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವರಾಧ್ಯ ಬಡಿಗೇರ್ ಮಾತನಾಡಿ, ರಾಜ್ಯ ಸರ್ಕಾರ ರೈತರಿಗೆ ವಿರೋಧವಾಗಿ ಕಾನೂನು ಜಾರಿಗೆ ತಂದಿರುವುದು ಅತ್ಯಂತ ಖಂಡನೀಯ. ಕಾರ್ಖಾನೆಗಳ ನೆಪದಲ್ಲಿ ಸರ್ಕಾರ ರೈತರ ಭೂಮಿಯನ್ನು ಕಸಿದುಕೊಳ್ಳಲು ಮುಂದಾಗಿದೆ. ಕೂಡಲೇ ಈ ತಿದ್ದುಪಡಿ ಕೈಬಿಡಬೇಕೆಂದು ಆಗ್ರಹಿಸಿದರು.
ಈ ಕಾಯ್ದೆ ಕೈಬಿಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಹಸಿರು ಸೇನೆಯ ರೈತ ಸಂಘದ ಅಧ್ಯಕ್ಷರು ರಾಜ್ಯ ರೈತ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ರೈತರು ಉಪಸ್ಥಿತರಿದ್ದರು.
Laxmi News 24×7