Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಪ್ರಭಾಶುಗರ್ಸ್ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ.

ಪ್ರಭಾಶುಗರ್ಸ್ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ.

Spread the love

ಗೋಕಾಕ : ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು.
ಸೋಮವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದೇ ಕಂತಿನಲ್ಲಿ ರೈತರಿಗೆ ಬಿಲ್ಲನ್ನು ಪಾವತಿಸಲಾಗುವುದು ಎಂದು ಹೇಳಿದರು.
ಪ್ರಸಕ್ತ 2021-22ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ ಉತ್ತಮ ಇಳುವರಿಯ ಕಬ್ಬನ್ನು ಪೂರೈಕೆ ಮಾಡುವಂತೆ ರೈತರಲ್ಲಿ ಕೋರಿಕೊಂಡಿರುವ ಅವರು, ರೈತರ ಸಹಕಾರದಿಂದ ನಮ್ಮ ಕಾರ್ಖಾನೆಯು ಪ್ರಗತಿಪಥದತ್ತ ಸಾಗುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಟನ್ ಕಬ್ಬು ನುರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಅವರು ಹೇಳಿದರು.


ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ 20 ದಿನಗಳಿಗೊಮ್ಮೆ ಅವರ ಬ್ಯಾಂಕ್ ಖಾತೆಗಳಿಗೆ ಬಿಲ್ಲನ್ನು ಸಂದಾಯ ಮಾಡಲಾಗುವುದು. ನಮ್ಮ ನೆರೆ ಹೊರೆಯ ಕಾರ್ಖಾನೆಗಳು ನೀಡುವ ದರವನ್ನು ನಾವು ನೀಡುತ್ತೇವೆ ಎಂದು ಈ ಹಿಂದೆಯೇ ರೈತರ ಸಭೆಯಲ್ಲಿ ಹೇಳಲಾಗಿತ್ತು. ಅದರಂತೆಯೇ ಜಿಲ್ಲೆಯ ಬಹುತೇಕ ಕಾರ್ಖಾನೆಗಳು ಈಗಾಗಲೇ ದರವನ್ನು ಘೋಷಿಸಿದ್ದು, ಅದರನ್ವಯ ಈ ಬಾರಿ ಪ್ರತಿ ಟನ್ ಕಬ್ಬಿಗೆ ರೂಪಾಯಿ 2700 ಗಳನ್ನು ಆಡಳಿತ ಮಂಡಳಿಯ ನಿರ್ಣಯದಂತೆ ಘೋಷಿಸಲಾಗಿದೆ. ರೈತರ ಸಹಕಾರವೇ ನಮ್ಮ ಕಾರ್ಖಾನೆಗೆ ಶ್ರೀರಕ್ಷೆಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಖಾನೆಯಲ್ಲಿ ಆಯೋಜಿಸಿದ್ದ ಪೂಜಾ ಸಮಾರಂಭದಲ್ಲಿ ಭಾಗವಹಿಸಿದರು. ನಂತರ ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಉದ್ಯಮಿಗಳಾದ ಅಭಿನಂದನ ಪಾಟೀಲ, ಉತ್ತಮ ಪಾಟೀಲ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ, ಕಾರ್ಖಾನೆಯ ಸಿಇಓ ನಿತೀನ ಪಾಟೀಲ, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಜರುಗಿದ ಪೂಜಾ ಸಮಾರಂಭದಲ್ಲಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭಾಗಿಯಾದರು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಅಭಿನಂದನ ಪಾಟೀಲ, ಉತ್ತಮ ಪಾಟೀಲ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ ಉಪಸ್ಥಿತರಿದ್ದರು.
ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೋಮವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಅಭಿನಂದನ ಪಾಟೀಲ, ಉತ್ತಮ ಪಾಟೀಲ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ